ADVERTISEMENT

ಮಂಗಳೂರು: ಸೀಲ್ ಡೌನ್ ಇಲ್ಲ ಎಂದು ಸ್ಪಷ್ಟಪಡಿಸಿದ ಜಿಲ್ಲಾಡಳಿತ

​ಪ್ರಜಾವಾಣಿ ವಾರ್ತೆ
Published 10 ಏಪ್ರಿಲ್ 2020, 6:43 IST
Last Updated 10 ಏಪ್ರಿಲ್ 2020, 6:43 IST
ಮಂಗಳೂರಿನ ಕೇಂದ್ರ ಮಾರುಕಟ್ಟೆ –ಸಂಗ್ರಹ ಚಿತ್ರ
ಮಂಗಳೂರಿನ ಕೇಂದ್ರ ಮಾರುಕಟ್ಟೆ –ಸಂಗ್ರಹ ಚಿತ್ರ   

ಮಂಗಳೂರು: ನಗರದಲ್ಲಿ ಸೀಲ್ ಡೌನ್ ಆಗಿದೆ ಎಂಬ ಸುದ್ದಿ ಕೆಲವು ಮಾಧ್ಯಮಗಳಲ್ಲಿ ಬರುತ್ತಿದೆ. ಇದು ಆಧಾರರಹಿತ ಎಂದು ಜಿಲ್ಲಾಡಳಿತ ಹೇಳಿದೆ. ಜತೆಗೆ, ಮಂಗಳೂರು ನಗರದಲ್ಲಿ ಯಾವುದೇ ಸೀಲ್ ಡೌನ್ ಪ್ರಕ್ರಿಯೆ ನಡೆಯುತ್ತಿಲ್ಲ ಎಂದು ಸ್ಪಷ್ಟಪಡಿಸಿದೆ.

ಈಗಾಗಲೇ ಕಳೆದ ಕೆಲವು ದಿನಗಳಿಂದ ಲಾಕ್ ಡೌನ್ ಜಾರಿಯಲ್ಲಿದೆ. ಇದನ್ನೇ ಕಟ್ಟುನಿಟ್ಟಾಗಿ ಜಾರಿಗೆ ತರಲಾಗುತ್ತಿದೆ.

ಯಾವುದೇ ಸುದ್ದಿಯನ್ನು ಪ್ರಸಾರ ಮಾಡುವ ಮೊದಲು ಸಂಬಂಧಪಟ್ಟವರಿಂದ ದೃಢೀಕರಿಸಲು ಕೋರಲಾಗಿದೆ. ವದಂತಿ, ಅಧಾರ ರಹಿತ ಸುದ್ದಿಗಳ ಪ್ರಸಾರದಿಂದ ಸಾರ್ವಜನಿಕರಲ್ಲಿ ಆತಂಕ, ಗೊಂದಲ ಮೂಡುತ್ತಿದೆ ಎಂದು ಜಿಲ್ಲಾಡಳಿತ ಹೇಳಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.