ADVERTISEMENT

ಮಂಗಳೂರು: ಡಿಎನ್‌ಎ ಪರೀಕ್ಷೆಗೆ ನ್ಯಾಯಾಲಯ ಅನುಮತಿ

​ಪ್ರಜಾವಾಣಿ ವಾರ್ತೆ
Published 19 ಅಕ್ಟೋಬರ್ 2021, 4:19 IST
Last Updated 19 ಅಕ್ಟೋಬರ್ 2021, 4:19 IST

ಮಂಗಳೂರು: ನಗರದ ಲೇಡಿಗೋಶನ್ ಆಸ್ಪತ್ರೆಯಲ್ಲಿ ಮಗು ಬದಲಾಗಿರುವ ಆರೋಪಕ್ಕೆ ಸಂಬಂಧಿಸಿ, ಮಗು, ತಂದೆ ಹಾಗೂ ತಾಯಿಯ ಡಿಎನ್‌ಎ ಪರೀಕ್ಷೆಗೆ ನ್ಯಾಯಾಲಯ ಅನುಮತಿ ನೀಡಿದೆ.

ಮಗು ಅದಲು ಬದಲು ಆಗಿದೆ ಎಂದು ಆರೋಪಿಸಿ ಕುಂದಾಪುರ ನಿವಾಸಿ ಮುಸ್ತಫಾ ಎಂಬುವರು ನೀಡಿದ ದೂರಿನ ಆಧಾರದಲ್ಲಿ ಬಂದರು ಪೊಲೀಸ್ ಠಾಣೆಯಲ್ಲಿ ಮಗು ಅಪಹರಣ ದೂರು ದಾಖಲಾಗಿತ್ತು.

ನ್ಯಾಯಾಲಯ ನೀಡಿದ ಸೂಚನೆ ಆಧಾರದಲ್ಲಿ ಅ.19ರಂದು ಮಗು ಹಾಗೂ ಪೋಷಕರ ಡಿಎಎನ್ ಪರೀಕ್ಷೆಯಾಗಲಿದೆ. ಇದರ ಸ್ಯಾಂಪಲ್‌ ಅನ್ನು ಹೈದ್ರಾಬಾದ್ ಅಥವಾ ಬೆಂಗಳೂರಿನ ಪ್ರಯೋಗಾಲಯಕ್ಕೆ ಕಳುಹಿಸಲಾಗುವುದು. ಮೂರು ತಿಂಗಳೊಳಗೆ ಇದರ ವರದಿ ಬರಲಿದ್ದು, ಈ ವರದಿ ಆಧಾರದಲ್ಲಿ ಮುಂದಿನ ತನಿಖೆ ನಡೆಯಲಿದೆ ಎಂದು ಬಂದರು ಪೊಲೀಸರು ತಿಳಿಸಿದ್ದಾರೆ.

ADVERTISEMENT

ನಗರದ ಲೇಡಿಗೋಶನ್ ಆಸ್ಪತ್ರೆಯಲ್ಲಿ ಹೆರಿಗೆಯ ಸಂದರ್ಭ ಹೆಣ್ಣು ಮಗು ಎಂದು ದಾಖಲೆಯಲ್ಲಿ ನಮೂದಿಸಿ, ನಂತರ ಪೋಷಕರಿಗೆ ಗಂಡು ಮಗುವನ್ನು ನೀಡಿದ್ದಾರೆ ಎಂದು ಆರೋಪಿಸಿ, ಮಗುವಿನ ಪೋಷಕರು ನಗರದ ಬಂದರು ಪೊಲೀಸ್ ಠಾಣೆಗೆ ದೂರು ನೀಡಿ ನ್ಯಾಯ ಕೊಡಿಸುವಂತೆ ಮನವಿ ಮಾಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.