ಧರ್ಮಸ್ಥಳ ಪ್ರಕರಣ
ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ಅಪರಾಧ ನಡೆದಿದೆ ಎಂದು ಆರೋಪಿಸಲಾದ ಪ್ರಕರಣದ ಸಾಕ್ಷಿ ದೂರುದಾರನ ಹೇಳಿಕೆ ದಾಖಲಿಸುವ ಪ್ರಕ್ರಿಯೆ ಬೆಳ್ತಂಗಡಿಯ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಶನಿವಾರ ಪೂರ್ಣಗೊಂಡಿತು.
‘ಸಾಕ್ಷಿ ದೂರುದಾರನು ನ್ಯಾಯಾಧೀಶರ ಸಮ್ಮುಖದಲ್ಲಿ ಹೇಳಿಕೆ ನೀಡಿದ್ದಾನೆ’ ಎಂದು ಎಸ್‌ಐಟಿ ಮೂಲಗಳು ‘ಪ್ರಜಾವಾಣಿ’ಗೆ ತಿಳಿಸಿವೆ.
ಶಿವಮೊಗ್ಗ ಜೈಲಿನಲ್ಲಿದ್ದ ಸಾಕ್ಷಿ ದೂರುದಾರನನ್ನು ಪೊಲೀಸರು ಕೋರ್ಟ್‌ಗೆ ಬೆಳಿಗ್ಗೆ ಹಾಜರು ಪಡಿಸಿದರು. ಸಂಜೆ 4.30ರ ಬಳಿಕ ಬಿಗಿ ಭದ್ರತೆಯಲ್ಲಿ ಶಿವಮೊಗ್ಗ ಜೈಲಿಗೆ ಕರೆದೊಯ್ಯಲಾಯಿತು.
ಈ ಪ್ರಕರಣ ಸಂಬಂಧ ಸಾಕ್ಷಿ ದೂರುದಾರ ಸೆ.23, ಸೆ.25 ಹಾಗೂ ಶನಿವಾರ ನ್ಯಾಯಾಧೀಶರ ಮುಂದೆ ಹೇಳಿಕೆ ನೀಡಿದ್ದಾನೆ. ಹೇಳಿಕೆ ದಾಖಲಿಸುವಾಗ ನ್ಯಾಯಾಧೀಶರು ಮತ್ತು ಸಾಕ್ಷಿ ದೂರುದಾರನ ಹೊರತಾಗಿ ಬೇರೆ ಯಾರಿಗೂ ಕೊಠಡಿಗೆ ಪ್ರವೇಶಾವಕಾಶ ಇರಲಿಲ್ಲ ಎಂದು ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.