ADVERTISEMENT

432 ಮಂದಿಗೆ ಕೋವಿಡ್: 404 ಗುಣಮುಖ

ದ.ಕ. ಜಿಲ್ಲೆಯಲ್ಲಿ ಎಸ್‌ಎಆರ್‌ಐ, ಐಎಲ್‌ಐ ಪ್ರಕರಣಗಳೇ ಅಧಿಕ

​ಪ್ರಜಾವಾಣಿ ವಾರ್ತೆ
Published 19 ಸೆಪ್ಟೆಂಬರ್ 2020, 16:48 IST
Last Updated 19 ಸೆಪ್ಟೆಂಬರ್ 2020, 16:48 IST

ಮಂಗಳೂರು: ಜಿಲ್ಲೆಯಲ್ಲಿ ಶನಿವಾರ 432 ಮಂದಿಗೆ ಕೋವಿಡ್–19 ದೃಢವಾಗಿದ್ದು, 404 ಜನರು ಗುಣಮುಖರಾಗಿದ್ದಾರೆ. ಮೃತಪಟ್ಟ ಐವರಿಗೆ ಕೋವಿಡ್–19 ಖಚಿತವಾಗಿದೆ.

ಜಿಲ್ಲೆಯಲ್ಲಿ ಕೋವಿಡ್–19 ಸೋಂಕಿತರ ಸಂಖ್ಯೆ ಏರುತ್ತಲೇ ಇದ್ದು, ಶನಿವಾರ ಪತ್ತೆಯಾದ 432 ಪ್ರಕರಣಗಳ ಪೈಕಿ, 187 ಜನರಲ್ಲಿ ಸಾಮಾನ್ಯ ಶೀತ ಜ್ವರ (ಐಎಲ್‌ಐ) ದಿಂದಲೇ ಸೋಂಕು ತಗಲಿದೆ. 128 ಮಂದಿಗೆ ತೀವ್ರ ಉಸಿರಾಟ ತೊಂದರೆ (ಎಸ್‌ಎಆರ್‌ಐ), ಸೋಂಕಿತರ ಸಂಪರ್ಕದಿಂದ 98 ಮಂದಿಗೆ ಕೋವಿಡ್ ದೃಢವಾಗಿದೆ. 119 ಮಂದಿಯ ಸೋಂಕಿನ ಸಂಪರ್ಕವನ್ನು ಪತ್ತೆ ಮಾಡಲಾಗುತ್ತಿದೆ.

135 ಪುರುಷರು ಹಾಗೂ 91 ಮಹಿಳೆಯರು ಸೇರಿದಂತೆ 226 ಮಂದಿಯಲ್ಲಿ ರೋಗ ಲಕ್ಷಣಗಳು ಕಂಡುಬಂದಿವೆ. 101 ಪುರುಷರು, 105 ಮಹಿಳೆಯರು ಸೇರಿದಂತೆ 206 ಜನರಲ್ಲಿ ರೋಗ ಲಕ್ಷಣಗಳು ಇಲ್ಲ. ಮಂಗಳೂರು ತಾಲ್ಲೂಕಿನಲ್ಲಿಯೇ 194, ಬಂಟ್ವಾಳ 68, ಪುತ್ತೂರು 71, ಸುಳ್ಯ 13, ಬೆಳ್ತಂಗಡಿ 47, ಹೊರಜಿಲ್ಲೆಯ 39 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಸೋಂಕಿತರ ಸಂಖ್ಯೆ 19,754ಕ್ಕೆ ಏರಿಕೆಯಾಗಿದೆ.

ADVERTISEMENT

404 ಮಂದಿ ಗುಣಮುಖ: ಜಿಲ್ಲೆಯ ವಿವಿಧ ಆಸ್ಪತ್ರೆಗಳಿಂದ 312 ಮಂದಿ, ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 92 ಮಂದಿ ಸೇರಿದಂತೆ 404 ಮಂದಿ ಗುಣಮುಖರಾಗಿದ್ದಾರೆ. ಅವರ ಗಂಟಲು ದ್ರವದ ಮಾದರಿ ವರದಿ ನೆಗೆಟಿವ್‌ ಬಂದಿದ್ದು, 14 ದಿನಗಳ ಹೋಂ ಕ್ವಾರಂಟೈನ್‌ಗೆ ಒಳಪಡಿಸಲಾಗಿದೆ.

ಐದು ಸಾವು: ಜಿಲ್ಲೆಯಲ್ಲಿ ಐವರು ಮೃತಪಟ್ಟಿದ್ದು, ಅವರಿಗೆ ಕೋವಿಡ್–19 ಇರುವುದು ದೃಢವಾಗಿದೆ. ಮಂಗಳೂರು ತಾಲ್ಲೂಕಿನ ಮೂವರು, ಬೆಳ್ತಂಗಡಿ ಹಾಗೂ ಹೊರಜಿಲ್ಲೆಯ ತಲಾ ಒಬ್ಬರು ಅನಾರೋಗ್ಯದ ಸಮಸ್ಯೆಯಿಂದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಜಿಲ್ಲೆಯಲ್ಲಿ ಮೃತರ ಸಂಖ್ಯೆ 477ಕ್ಕೆ ಏರಿಕೆಯಾಗಿದೆ.

ಕಾಸರಗೋಡು: 191 ಮಂದಿಗೆ ಕೋವಿಡ್

ಕಾಸರಗೋಡು ಜಿಲ್ಲೆಯಲ್ಲಿ ಶನಿವಾರ 191 ಮಂದಿಗೆ ಕೋವಿಡ್–19 ದೃಢವಾಗಿದ್ದು, 176 ಮಂದಿಗೆ ಸಂಪರ್ಕದಿಂದ ಸೋಂಕು ತಗುಲಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದ್ದಾರೆ.

ಶನಿವಾರ 203 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಈ ವರೆಗೆ ಒಟ್ಟು 8,196 ಮಂದಿಗೆ ಕೋವಿಡ್ ದೃಢವಾಗಿದ್ದು, 6,119 ಮಂದಿಗೆ ಗುಣಮುಖರಾಗಿದ್ದಾರೆ. 2,011 ಸಕ್ರಿಯ ಪ್ರಕರಣಗಳಿದ್ದು, ಮೃತರ ಸಂಖ್ಯೆ 66 ಕ್ಕೆ ಏರಿದೆ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.