ADVERTISEMENT

ಇನ್ನೂ 20 ವರದಿಗೆ ನಿರೀಕ್ಷೆ

ದೆಹಲಿ ಸಮಾವೇಶಕ್ಕೆ ಹೋದ ಇಬ್ಬರಿಗೆ ಸೋಂಕು

​ಪ್ರಜಾವಾಣಿ ವಾರ್ತೆ
Published 4 ಏಪ್ರಿಲ್ 2020, 16:55 IST
Last Updated 4 ಏಪ್ರಿಲ್ 2020, 16:55 IST
ವೇದವ್ಯಾಸ್ ಕಾಮತ್‌
ವೇದವ್ಯಾಸ್ ಕಾಮತ್‌   

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶನಿವಾರ ಮತ್ತೆ ಮೂರು ಕೋವಿಡ್ 19 ಪ್ರಕರಣಗಳು ದೃಢಪಟ್ಟಿದ್ದು, ಇಲ್ಲಿಯವರೆಗೆ ಒಟ್ಟು 12 ಮಂದಿಗೆ ಕೋವಿಡ್–19 ಸೋಂಕು ತಗುಲಿದೆ. ಮೂರು ಹೊಸ ಪ್ರಕರಣಗಳಲ್ಲಿ ಒಬ್ಬರು ದುಬೈನಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದ ಮಹಿಳೆಯಾಗಿದ್ದು, ಇನ್ನಿಬ್ಬರು ದೆಹಲಿಯಲ್ಲಿ ತಬ್ಲೀಘಿ ಜಮಾತ್ ಸಮಾವೇಶದಲ್ಲಿ ಭಾಗವಹಿಸಿದವರಾಗಿದ್ದಾರೆ ಎಂದು ಶಾಸಕ ವೇದವ್ಯಾಸ ಕಾಮತ್‌ ಹೇಳಿದ್ದಾರೆ.

ಸಮಾವೇಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಭಾಗವಹಿಸಿದ್ದ 29 ಜನರಲ್ಲಿ 9 ಜನರ ವರದಿ ಬಂದಿದ್ದು, 2 ದೃಢಪಟ್ಟಿವೆ. ಉಳಿದ 20 ಜನರ ವರದಿಗಾಗಿ ಕಾಯಲಾಗುತ್ತಿದೆ. ಅವರ ಸಂಪರ್ಕದಲ್ಲಿದ್ದವರನ್ನು ಕ್ವಾರಂಟೈನ್ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ತಬ್ಲೀಘಿ ಜಮಾತ್ ಸಮಾವೇಶದಲ್ಲಿ ಭಾಗವಹಿಸಿದವರು ಇನ್ನು ಯಾರಾದರೂ ಇದ್ದಲ್ಲಿ ತಕ್ಷಣ ಜಿಲ್ಲಾಡಳಿತ, ಜಿಲ್ಲಾ ಆರೋಗ್ಯಾಧಿಕಾರಿಗಳನ್ನು ಭೇಟಿ ಮಾಡಬೇಕು ಎಂದು ಕೋರಿದ್ದಾರೆ.

ADVERTISEMENT

ಸಾಮಾಜಿಕ ಅಂತರವನ್ನು ಮನೆಯ ಒಳಗೂ ಪಾಲಿಸಬೇಕಾಗಿದ್ದು, ಆಶಾ ಕಾರ್ಯಕರ್ತೆಯರು ಮನೆ ಭೇಟಿಗೆ ಕೆಲವು ಪ್ರದೇಶಗಳಿಗೆ ಹೋದಾಗ ಒಂದೇ ಮನೆಯಲ್ಲಿ 40 - 50 ಜನರು ಗುಂಪಾಗಿ ಇರುವುದು ಕಂಡುಬಂದಿದ್ದು, ಯಾವುದೇ ಕಾರಣಕ್ಕೂ ಹಾಗೆ ಸೇರುವುದು ಸರಿಯಲ್ಲ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.