ADVERTISEMENT

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್-19 ಪ್ರಕರಣ ಹೆಚ್ಚಳ

​ಪ್ರಜಾವಾಣಿ ವಾರ್ತೆ
Published 19 ಡಿಸೆಂಬರ್ 2021, 15:42 IST
Last Updated 19 ಡಿಸೆಂಬರ್ 2021, 15:42 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ನಿಧಾನವಾಗಿ ಹೆಚ್ಚುತ್ತಿವೆ. ಭಾನುವಾರ ಬಂದ ವರದಿಯಲ್ಲಿ ಒಟ್ಟು 37 ಜನರಿಗೆ ಕೋವಿಡ್ ದೃಢಪಟ್ಟಿದೆ.

ಒಂದು ವಸತಿ ನಿಲಯ ಹಾಗೂ ಒಂದು ವಸತಿ ಶಾಲೆಯನ್ನು ಕೋವಿಡ್ ಕ್ಲಸ್ಟರ್ ಎಂದು ಈಗಾಗಲೇ ಘೋಷಿಸಲಾಗಿದೆ. ಈ ಎರಡು ಕ್ಲಸ್ಟರ್‌ಗಳಲ್ಲಿ ನಡೆಸಿರುವ ತಪಾಸಣೆಯಲ್ಲಿ ಹೆಚ್ಚುವರಿ ಪ್ರಕರಣಗಳು ಭಾನುವಾರ ದೃಢಪಟ್ಟಿವೆ. ಈಗಾಗಲೇ ಪಾಸಿಟಿವ್ ಬಂದವರ ಪ್ರಾಥಮಿಕ ಸಂಪರ್ಕಿತರನ್ನು ತಪಾಸಣೆಗೆ ಒಳಪಡಿಸಿದಾಗ ಹೆಚ್ಚುವರಿ ಪ್ರಕರಣಗಳು ಪತ್ತೆಯಾಗಿವೆ. 300ಕ್ಕೂ ಹೆಚ್ಚು ತಪಾಸಣೆ ನಡೆಸಲಾಗಿದೆ ಎಂದು ಕೋವಿಡ್ ಜಿಲ್ಲಾ ನೋಡಲ್ ಅಧಿಕಾರಿ ಡಾ. ಅಶೋಕ್ ತಿಳಿಸಿದರು.

ಹೆಚ್ಚಾಗಿ ಶಾಲೆ– ಕಾಲೇಜುಗಳಲ್ಲಿ ಪಾಸಿಟಿವ್ ಪ್ರಕರಣ ಹೆಚ್ಚು ಬರುತ್ತಿದೆ. ಮಕ್ಕಳ ಪರಸ್ಪರ ಭೇಟಿ ನಿಯಂತ್ರಿಸುವುದು ಕಷ್ಟವಾಗುವುದರಿಂದ, ಪಾಸಿಟಿವ್ ಪ್ರಕರಣ ಬರುವ ಇಡೀ ವಸತಿ ನಿಲಯ ಅಥವಾ ಶಿಕ್ಷಣ ಸಂಸ್ಥೆಯನ್ನು ಕ್ಲಸ್ಟರ್ ಆಗಿ ಗುರುತಿಸಿ, ಆರ್‌ಟಿಪಿಸಿಆರ್ ಪರೀಕ್ಷೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.

ADVERTISEMENT

ಶಿಕ್ಷಣ ಸಂಸ್ಥೆಗಳಲ್ಲೂ ಕೇರಳ ರಾಜ್ಯದಿಂದ ಬಂದಿರುವ ವಿದ್ಯಾರ್ಥಿಗಳಲ್ಲೇ ಹೆಚ್ಚು ಪಾಸಿಟಿವ್ ಪ್ರಕರಣಗಳು ಕಂಡುಬರುತ್ತಿವೆ. ಅಲ್ಲದೆ, ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ನಿಧಾನವಾಗಿ ಹೆಚ್ಚುತ್ತಿರುವುದರಿಂದ ಪರೀಕ್ಷೆಯನ್ನು ಹೆಚ್ಚಿಸಲಾಗಿದೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.