ADVERTISEMENT

ಕೋವಿಡ್–19 ನೆಗೆಟಿವ್ ವರದಿ ಕಡ್ಡಾಯ: ಮತ್ತೆ ಗಡಿನಾಡ ಕನ್ನಡಿಗರ ಆಕ್ರೋಶ

​ಪ್ರಜಾವಾಣಿ ವಾರ್ತೆ
Published 20 ಮಾರ್ಚ್ 2021, 12:09 IST
Last Updated 20 ಮಾರ್ಚ್ 2021, 12:09 IST
ಗಡಿನಾಡು ಕನ್ನಡಿಗರು ವಾಹನಗಳನ್ನು ತಡೆದು ತಪಾಸಣೆ ನಡೆಸದಂತೆ ತಾಕೀತು ಮಾಡಿದರು.
ಗಡಿನಾಡು ಕನ್ನಡಿಗರು ವಾಹನಗಳನ್ನು ತಡೆದು ತಪಾಸಣೆ ನಡೆಸದಂತೆ ತಾಕೀತು ಮಾಡಿದರು.   

ಮಂಗಳೂರು: ಕೇರಳ-ಕರ್ನಾಟಕ ಗಡಿ ತಲಪಾಡಿಯಲ್ಲಿ ಶನಿವಾರದಿಂದ ಕೋವಿಡ್–19 ನೆಗೆಟಿವ್‌ ವರದಿ ಕಡ್ಡಾಯ ಮಾಡಿದ್ದಕ್ಕೆ ಗಡಿ ನಾಡು ಕನ್ನಡಿಗರಿಂದ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಭಾರೀ ಸಂಖ್ಯೆಯಲ್ಲಿ ಜಮಾಯಿಸಿದ ಗಡಿನಾಡು ಕನ್ನಡಿಗರು, ವಾಹನಗಳನ್ನು ತಡೆದು ತಪಾಸಣೆ ನಡೆಸದಂತೆ ತಾಕೀತು ಮಾಡಿದರು.

ಗಡಿಯಲ್ಲಿ ಆರ್‌ಟಿಪಿಸಿಆರ್ ಪರೀಕ್ಷೆ ನಡೆಸಲು ಯಾವುದೇ ಅಭ್ಯಂತರವಿಲ್ಲ. ವಾಹನಗಳು ಮತ್ತು ಬಸ್‌ಗಳನ್ನು ತಡೆಯದಂತೆ ದಕ್ಷಿಣ ಕನ್ನಡ ಜಿಲ್ಲಾಡಳಿತಕ್ಕೆ ಮನವಿ ಮಾಡಿದರು.

ವಾಹನ ತಡೆದು ನೆಗೆಟಿವ್ ವರದಿ ಕಡ್ಡಾಯ ಮಾಡಬಾರದು. ದಕ್ಷಿಣ ಕನ್ನಡ ಜಿಲ್ಲಾಡಳಿತ ಇದೇ ರೀತಿ ವರ್ತಿಸಿದರೆ, ಯಾವುದೇ ವಾಹನ ಮಂಗಳೂರಿನಿಂದ ಕೇರಳಕ್ಕೆ ಹೋಗದಂತೆ ತಡೆಯಲಾಗುವುದು ಎಂದು ಎಚ್ಚರಿಸಿದರು.

ADVERTISEMENT

ಗಡಿನಾಡ ಕನ್ನಡಿಗರ ಆಕ್ರೋಶದಿಂದ ಗೊಂದಲಕ್ಕೆ ಸಿಲುಕಿದ ದಕ್ಷಿಣ ಕನ್ನಡ ಜಿಲ್ಲಾಡಳಿತ, ಗಡಿಯಲ್ಲಿ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಿದೆ. ಆದರೆ, ಆರ್‌ಟಿಪಿಸಿಆರ್ ಪರೀಕ್ಷೆಯನ್ನು ಕಡ್ಡಾಯವಾಗಿ ಮಾಡಿಸಿಕೊಳ್ಳುವಂತೆ ಸೂಚನೆ ನೀಡಿದೆ.

ಸದ್ಯ ತಲಪಾಡಿ ಚೆಕ್‌ಪೋಸ್ಟ್‌ನಲ್ಲಿ ಉಚಿತವಾಗಿ ಆರ್‌ಟಿಪಿಸಿಆರ್ ಪರೀಕ್ಷೆ ನಡೆಸಲಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.