ADVERTISEMENT

ದಕ್ಷಿಣ ಕನ್ನಡ ಕೋವಿಡ್: ಮತ್ತೊಂದು ಸಾವು

​ಪ್ರಜಾವಾಣಿ ವಾರ್ತೆ
Published 10 ಜುಲೈ 2020, 6:54 IST
Last Updated 10 ಜುಲೈ 2020, 6:54 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ ಕೋವಿಡ್ ನಿಂದ ಮತ್ತೊಬ್ಬ ಯುವಕ ಮೃತಪಟ್ಟಿದ್ದು, ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 31ಕ್ಕೆ ಏರಿಕೆಯಾಗಿದೆ.

ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಂಗಳೂರು ಹೊರವಲಯದ ಹೊಸಬೆಟ್ಟು ನಿವಾಸಿ 35 ವರ್ಷದ ಯುವಕ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ. ಗುರುವಾರ 167 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಪ್ರಾಥಮಿಕ ಸಂಪರ್ಕದಿಂದಲೇ 64 ಮಂದಿಯಲ್ಲಿ ಸೋಂಕು ದೃಢಪಟ್ಟಿತ್ತು. ಜಿಲ್ಲೆಯಲ್ಲಿಒಟ್ಟು ಸೋಂಕಿತರ ಸಂಖ್ಯೆ 1709ಕ್ಕೆ ಏರಿಕೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT