ADVERTISEMENT

ದ.ಕ: 48 ಮಂದಿಗೆ ಕೋವಿಡ್‌ ದೃಢ

​ಪ್ರಜಾವಾಣಿ ವಾರ್ತೆ
Published 2 ಜನವರಿ 2022, 4:24 IST
Last Updated 2 ಜನವರಿ 2022, 4:24 IST

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶನಿವಾರ 48 ಕೋವಿಡ್‌ ಪ್ರಕರಣಗಳು ಪತ್ತೆಯಾಗಿದೆ. ಮಂಗಳೂರಿನಬಿಜೈಯ ಒಂದೇ ಕುಟುಂಬದ ನಾಲ್ವರಿಗೆ ಕೋವಿಡ್‌ ದೃಢಪಟ್ಟಿದೆ.

ಮೂರು ದಿನಗಳಿಂದ ಜಿಲ್ಲೆಯಲ್ಲಿ ಸೋಂಕಿನ ಪ್ರಕರಣ ಹೆಚ್ಚಾಗುತ್ತಿದ್ದು, 15ರಿಂದ 20ರೊಳಗೆ ಇದ್ದ ಸೋಂಕಿನ ಸಂಖ್ಯೆಯು ಈಗ 30ರಿಂದ 48ಕ್ಕೆ ಏರಿಕೆ ಕಂಡಿದೆ. ಸದ್ಯದ ಪಾಸಿಟಿವಿಟಿ ದರ ಶೇ 0.61 ರಷ್ಟಿದೆ. ‘ಎರಡು ದಿನಗಳಿಂದ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಜನರು ಭಯ ಪಡಬೇಕಿಲ್ಲ. ಮಾಸ್ಕ್‌ ಧರಿಸುವುದು ಸೇರಿದಂತೆ ಅಗತ್ಯ ಕ್ರಮ ಅನುಸರಿಸುವುದು ಮುಖ್ಯ’ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ ಕಿಶೋರ್‌ ಕುಮಾರ್‌ ತಿಳಿಸಿದರು.

ಓಮೈಕ್ರಾನ್‌ ಸೋಂಕಿನ ಹೊಸ ಪ್ರಕರಣಗಳು ಜಿಲ್ಲೆಯಲ್ಲಿ ಪತ್ತೆಯಾಗಿಲ್ಲ, ಸೋಂಕು ತಡೆಗೆ ಅಗತ್ಯ ಕ್ರಮಗಳನ್ನು ಇಲಾಖೆ ಹಾಗೂ ಜಿಲ್ಲಾಡಳಿತ ತೆಗೆದುಕೊಂಡಿದೆ. ಶನಿವಾರ 12 ಮಂದಿ ಗುಣಮುಖರಾಗಿದ್ದು, 187 ಸಕ್ರಿಯ ಪ್ರಕರಣಗಳು ಇವೆ ಎಂದು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.