ADVERTISEMENT

ದಕ್ಷಿಣ ಕನ್ನಡ: ಮತ್ತಿಬ್ಬರಿಗೆ ಕೋವಿಡ್-19 ದೃಢ

​ಪ್ರಜಾವಾಣಿ ವಾರ್ತೆ
Published 17 ಮೇ 2020, 10:19 IST
Last Updated 17 ಮೇ 2020, 10:19 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಲ್ಲೇ ಇದ್ದು, ಭಾನುವಾರ ಮತ್ತೆ ಇಬ್ಬರಿಗೆ ಸೋಂಕು ದೃಢಪಟ್ಟಿದೆ.

ಮಹಾರಾಷ್ಟ್ರದಿಂದ ಬಂದ 35 ವರ್ಷದ ಒಬ್ಬ ಮಹಿಳೆಯಲ್ಲಿ ಸೋಂಕು ಪತ್ತೆಯಾಗಿದ್ದು, 31 ವರ್ಷದ ಪುರುಷನಿಗೂ ಕೋವಿಡ್ -19 ದೃಢವಾಗಿದೆ.

31 ವರ್ಷದ ಪುರುಷ ಜಪ್ಪಿನಮೊಗರು ನಿವಾಸಿಯಾಗಿದ್ದು ಕೋವಿಡ್ -19 ಶಂಕೆಯಿಂದಾಗಿ ಆಸ್ಪತ್ರೆಗೆ ಬಂದು ಸ್ವಯಂ ಪರೀಕ್ಷೆ ಮಾಡಿಸಿಕೊಂಡಿದ್ದಾರೆ. ಸೋಂಕು ದೃಢವಾಗಿದೆ.

ADVERTISEMENT

35 ವರ್ಷದ ಮಹಿಳೆ ನಗರದ ಯೆಯ್ಯಾಡಿ ನಿವಾಸಿಯಾಗಿದ್ದು ಇದೇ 14 ರಂದು ಮುಂಬೈನಿಂದ ಬಂದಿದ್ದು, ಆಕೆಯ ಪತಿ ಮತ್ತು ಮಗುವಿನೊಂದಿಗೆ ಕ್ವಾರಂಟೈನ್‌ನಲ್ಲಿದ್ದರು.

ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 52ಕ್ಕೆ ಏರಿದ್ದು, ಐವರು ಮಹಿಳೆಯರು ಮೃತಪಟ್ಟಿದ್ದಾರೆ. 31 ಜನರುನಗರದ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 16 ಮಂದಿ ಗುಣಮುಖರಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.