ಮಂಗಳೂರು: ಮೃತಪಟ್ಟ ಇಬ್ಬರಲ್ಲಿ ಕೊರೊನಾ ಸೋಂಕು ಇರುವುದು ಗುರುವಾರದ ಪರೀಕ್ಷೆಯಲ್ಲಿ ದೃಢಪಟ್ಟಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು ಕೊರೊನಾ ಸೋಂಕಿತರ ಸಾವಿನ ಸಂಖ್ಯೆಯು 700ಕ್ಕೆ ತಲುಪಿದೆ.
54 ಮಂದಿಯಲ್ಲಿ ಸೋಂಕು ಇರುವುದು ಗುರುವಾರದ ಪರೀಕ್ಷೆಯಲ್ಲಿ ಖಚಿತಗೊಂಡಿದ್ದು, ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 31,438ಕ್ಕೇರಿದೆ.
ಸೋಂಕಿತ 54 ಮಂದಿ ಗುರುವಾರ ಗುಣಮುಖರಾಗಿದ್ದು, ಒಟ್ಟು ಗುಣಮುಖರ ಸಂಖ್ಯೆಯು 30,073ಕ್ಕೆ ತಲುಪಿದೆ. ಸಕ್ರಿಯ ಪ್ರಕರಣಗಳು 665 ಇವೆ.
ಮಾಸ್ಕ್ ಉಲ್ಲಂಘನೆ:ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ತನಕ 13,493 ಮಾಸ್ಕ್ ಉಲ್ಲಂಘನೆ ಪ್ರಕರಣಗಳು ದಾಖಲಾಗಿದ್ದು, ₹14.59 ಲಕ್ಷ ದಂಡ ವಸೂಲಿ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.
ಕಾಸರಗೋಡು ಜಿಲ್ಲೆ: ನೆರೆಯ ಕಾಸರಗೋಡು ಜಿಲ್ಲೆಯಲ್ಲಿ 145 ಮಂದಿಯಲ್ಲಿ ಕೊರೊನಾ ಸೋಂಕು ಇರುವುದುಗುರುವಾರದ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಸೋಂಕಿತರಾಗಿದ್ದ 146 ಮಂದಿ ಗುಣಮುಖರಾಗಿದ್ದಾರೆ. ಸದ್ಯ 1,186 ಸಕ್ರಿಯ ಪ್ರಕರಣಗಳಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.