ADVERTISEMENT

ಸಚಿವ ಅಂಗಾರ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿ ಉಲ್ಲಂಘಣೆ ಆರೋಪ

​ಪ್ರಜಾವಾಣಿ ವಾರ್ತೆ
Published 6 ಜೂನ್ 2021, 11:52 IST
Last Updated 6 ಜೂನ್ 2021, 11:52 IST
ಕಡಬದ ಸರಸ್ವತಿ ವಿದ್ಯಾಲಯದಲ್ಲಿ ಸಚಿವ ಎಸ್.ಅಂಗಾರ ನೇತೃತ್ವದಲ್ಲಿ ಬಿಜೆಪಿ ಸಭೆಯಲ್ಲಿ ಭಾಗವಹಿಸಿದ್ದ ಕಾರ್ಯಕರ್ತರು
ಕಡಬದ ಸರಸ್ವತಿ ವಿದ್ಯಾಲಯದಲ್ಲಿ ಸಚಿವ ಎಸ್.ಅಂಗಾರ ನೇತೃತ್ವದಲ್ಲಿ ಬಿಜೆಪಿ ಸಭೆಯಲ್ಲಿ ಭಾಗವಹಿಸಿದ್ದ ಕಾರ್ಯಕರ್ತರು   

ಕಡಬ: ಇಲ್ಲಿನ ಸರಸ್ವತಿ ವಿದ್ಯಾಲಯದಲ್ಲಿ ಸಚಿವ ಎಸ್.ಅಂಗಾರ ನೇತೃತ್ವದಲ್ಲಿ ಬಿಜೆಪಿ ಸಭೆ ನಡೆದಿದ್ದು, ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಲಾಗಿದೆ ಎಂಬ ಆರೋಪ ವ್ಯಕ್ತವಾಗಿದೆ. ಆದರೆ, ಅದನ್ನು ಸಚಿವರು ಅಲ್ಲಗಳೆದಿದ್ದು, ‘ಕೋವಿಡ್‌ ವಿಚಾರವಾಗಿ ತುರ್ತು ಪ್ರಮುಖರ ಸಭೆ ನಡೆಸಲಾಗಿತ್ತು’ ಎಂದು ಹೇಳಿಕೆ ನೀಡಿದ್ದಾರೆ.

ಭಾನುವಾರ ನಡೆದ ಸಭೆಯಲ್ಲಿ ಕೋವಿಡ್ ನಿಯಮಗಳನ್ನು ಉಲ್ಲಂಘನೆ ಮಾಡಿ ಬಿಜೆಪಿಯನೂರಾರು ಕಾರ್ಯಕರ್ತರು ಭಾಗವಹಿಸಿದ್ದಾರೆ ಎನ್ನುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಬ್ಬಿತ್ತು. ಈ ಸಭೆಗೆ ಮಾಧ್ಯಮದವರಿಗೆ ಪ್ರವೇಶ ನಿರ್ಬಂಧಿಸಲಾಗಿತ್ತು.

ಸಭೆಗೆ ವರದಿ ಮಾಡಲು ತೆರಳಿದ್ದ ವೆಬ್‌ಸೈಟ್ ಸಿಬ್ಬಂದಿ ವಿಡಿಯೊ ಮಾಡುತ್ತಿದ್ದಾಗ ಅದಕ್ಕೆ ಕಾರ್ಯಕರ್ತರಿಂದ ಆಕ್ಷೇಪವೂ ವ್ಯಕ್ತವಾಗಿ, ಮಾತಿನ ಚಕಮಕಿಯೂ ನಡೆದಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.