ಮಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಗುರುವಾರ ಮೃತಪಟ್ಟಿರುವ 22 ಜನರಲ್ಲಿ ಕೋವಿಡ್ ಸೋಂಕು ಇರುವುದು ದೃಢಪಟ್ಟಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 498 ಮಂದಿಗೆ ಸೋಂಕು ದೃಢಪಟ್ಟಿದೆ. 702 ಜನರು ಗುಣಮುಖರಾಗಿದ್ದಾರೆ. 15 ಮಂದಿ ಮೃತಪಟ್ಟಿದ್ದಾರೆ.
ಉಡುಪಿ: ಜಿಲ್ಲೆಯಲ್ಲಿ ಗುರುವಾರ 123 ಜನರಿಗೆ ಕೋವಿಡ್ ತಗುಲಿರುವುದು ಪರೀಕ್ಷೆಯಿಂದ ಖಚಿತವಾಗಿದೆ. 209 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ 7 ಮಂದಿ ಮೃತಪಟ್ಟಿದ್ದಾರೆ.
ಕಾಸರಗೋಡು: ನೆರೆಯ ಕಾಸರಗೋಡು ಜಿಲ್ಲೆಯಲ್ಲಿ ಗುರುವಾರ 439 ಮಂದಿಗೆ ಕೋವಿಡ್ ದೃಢಪಟ್ಟಿದೆ. 417 ಜನರು ಗುಣಮುಖರಾಗಿದ್ದಾರೆ. 4,038 ಸಕ್ರಿಯ ಪ್ರಕರಣಗಳು ಇವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.