ADVERTISEMENT

ಮಂಗಳೂರು: ಕೊರೊನಾ ಸೋಂಕಿನಿಂದ ಇಬ್ಬರು ಸಾವು

​ಪ್ರಜಾವಾಣಿ ವಾರ್ತೆ
Published 1 ಜುಲೈ 2020, 4:53 IST
Last Updated 1 ಜುಲೈ 2020, 4:53 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಮಂಗಳೂರು: ಕೊರೊನಾ ಸೋಂಕಿನಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ ಇಬ್ಬರ ಸಾವು ಸಂಭವಿಸಿದೆ.

31 ವರ್ಷ ವಯಸ್ಸಿನ ಭಟ್ಕಳದ ಯುವಕನನ್ನು ಮಂಗಳವಾರ ನಗರದ ಎ.ಜೆ.ಆಸ್ಪತ್ರೆಗೆ ಕರೆತರಲಾಗಿತ್ತು. ಆಸ್ಪತ್ರೆ ಸಮೀಪಿಸುವಷ್ಟರಲ್ಲಿ ಯುವಕ ಕೊನೆಯುಸಿರೆಳೆದಿದ್ದ. ಬಳಿಕ ಮೃತದೇಹದ ಗಂಟಲಿನ ದ್ರವದ ಪರೀಕ್ಷೆ ನಡೆಸಿದ್ದು, ಕೋವಿಡ್ ಸೋಂಕು ತಗುಲಿರುವುದು ದೃಢಪಟ್ಟಿದೆ. ಮೃತ ಯುವಕ ಅನಿಯಂತ್ರಿತ ಮಧುಮೇಹದ ಸಮಸ್ಯೆಯಿಂದ ಬಳಲುತ್ತಿದ್ದ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಅತಿಯಾದ ರಕ್ತದೊತ್ತಡ ಸೇರಿದಂತೆ ವಯೋಸಹಜ ಸಮಸ್ಯೆಗಳಿಂದ ಬಳಲುತ್ತಿದ್ದ 72 ವರ್ಷ ವಯಸ್ಸಿನ ವೃದ್ಧರೊಬ್ಬರನ್ನು ದೇರಳಕಟ್ಟೆಯ ಯೆನೆಪೋಯ ಆಸ್ಪತ್ರೆಗೆ ಸೋಮವಾರ ದಾಖಲಿಸಲಾಗಿತ್ತು‌. ಅವರಿಗೂ ಕೋವಿಡ್ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಮಂಗಳವಾರ ರಾತ್ರಿ ಅವರನ್ನು ವೆನ್ಲಾಕ್ ಕೋವಿಡ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಕೋವಿಡ್ ಆಸ್ಪತ್ರೆಗೆ ಬಂದ ಕೆಲವೇ ನಿಮಿಷಗಳಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಾಮಚಂದ್ರ ಬಾಯರಿ ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.