ADVERTISEMENT

ದಕ್ಷಿಣ ಕನ್ನಡ: ಕೋವಿಡ್ ಪಾಸಿಟಿವಿಟಿ ದರ ಶೇ 7.19ಕ್ಕೆ ಇಳಿಕೆ

​ಪ್ರಜಾವಾಣಿ ವಾರ್ತೆ
Published 14 ಜೂನ್ 2021, 5:15 IST
Last Updated 14 ಜೂನ್ 2021, 5:15 IST

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ದರ ಭಾನುವಾರ ಶೇ 7.19ಕ್ಕೆ ಇಳಿಕೆಯಾಗಿದೆ. ಶನಿವಾರ ಪಾಸಿಟಿವಿಟಿ ದರ ಶೇ 12.92ರಷ್ಟಿತ್ತು.

ಜಿಲ್ಲೆಯಲ್ಲಿ ಭಾನುವಾರ 434 ಮಂದಿಗೆ ಕೋವಿಡ್ ದೃಢಪಟ್ಟಿದೆ. 476 ಮಂದಿ ಗುಣಮುಖರಾಗಿದ್ದಾರೆ.

ಕಾಸರಗೋಡು: ನೆರೆಯ ಕಾಸರಗೋಡು ಜಿಲ್ಲೆಯಲ್ಲಿ ಭಾನುವಾರ 419 ಮಂದಿಗೆ ಕೋವಿಡ್ ದೃಢಪಟ್ಟಿದೆ. 552 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ 4,001 ಸಕ್ರಿಯ ಪ್ರಕರಣಗಳು ಇವೆ.

ADVERTISEMENT

45 ಪ್ರಕರಣ: ಜಿಲ್ಲೆಯಲ್ಲಿ ಭಾನುವಾರ ಕಪ್ಪು ಶಿಲೀಂಧ್ರ ಬಾಧಿತ ಹೊಸ ಪ್ರಕರಣ ಪತ್ತೆಯಾಗಿಲ್ಲ. ಒಟ್ಟು 45 ಸಕ್ರಿಯ ಪ್ರಕರಣಗಳು ಇವೆ. ಅವುಗಳಲ್ಲಿ ಒಂಬತ್ತು ಜನರು ದಕ್ಷಿಣ ಕನ್ನಡ ಜಿಲ್ಲೆಯವರಾದರೆ, ಉಳಿದ 36 ಜನರು ಹೊರ ಜಿಲ್ಲೆಯವರಾಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.