ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ದೇವರ ದರ್ಶನ ಮತ್ತು ಸೇವೆಗಳನ್ನು ನೆರವೇರಿಸಲು ಕೋವಿಡ್-19 ತಡೆ ಮಾರ್ಗ ಸೂಚಿ ಪಾಲನೆ ಕಡ್ಡಾಯಗೊಳಿಸಲಾಗಿದೆ. 2 ಡೋಸ್ ಕೋವಿಡ್ ತಡೆ ಲಸಿಕೆ ಪಡೆದಿರಬೇಕು, 72 ಗಂಟೆ ಮುಂಚಿತ ಆರ್‌ಟಿಪಿಸಿಆರ್ ನೆಗೆಟಿವ್ ವರದಿ ಹೊಂದಿದ್ದರೆ ಮಾತ್ರ ಸೇವೆಗೆ ಅವಕಾಶ ನೀಡಲಾಗುತ್ತದೆ.
ಲಸಿಕಾ ಕೇಂದ್ರ: ದೇವಳದ ರಾಜಗೋಪುರದ ಬಳಿ ಭಕ್ತರಿಗಾಗಿ ಕೋವಿಡ್ ಲಸಿಕಾ ಕೇಂದ್ರವನ್ನು ಸ್ಥಾಪಿಸಲಾಗಿದೆ. ಇಲ್ಲಿಯೇ ಆರ್‌ಟಿಪಿಸಿಆರ್ ಪರೀಕ್ಷಾ ಕೇಂದ್ರವನ್ನೂ ತೆರೆಯಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.