ADVERTISEMENT

ಮನೆಯೊಳಗೆ ಅಕ್ರಮ ಮರ ದಾಸ್ತಾನು ಪತ್ತೆ

​ಪ್ರಜಾವಾಣಿ ವಾರ್ತೆ
Published 18 ಆಗಸ್ಟ್ 2022, 3:59 IST
Last Updated 18 ಆಗಸ್ಟ್ 2022, 3:59 IST
ಅಕ್ರಮವಾಗಿ ದಾಸ್ತಾನು ಇರಿಸಿರುವ ಹೆಬ್ಬಲಸು ದಿಮ್ಮಿಗಳು
ಅಕ್ರಮವಾಗಿ ದಾಸ್ತಾನು ಇರಿಸಿರುವ ಹೆಬ್ಬಲಸು ದಿಮ್ಮಿಗಳು   

ಉಪ್ಪಿನಂಗಡಿ: ಕೊಯಿಲ ಗ್ರಾಮದ ಗಂಡಿಬಾಗಿಲು ಎಂಬಲ್ಲಿ ಮನೆಯೊಳಗೆ ಅಕ್ರಮವಾಗಿ ಹೆಬ್ಬಲಸು ಮರಗಳನ್ನು ದಾಸ್ತಾನು ಇರಿಸಿದ್ದ ಪ್ರಕರಣವನ್ನು ಪುತ್ತೂರು ವಲಯ ಅರಣ್ಯ ಇಲಾಖಾ ಅಧಿಕಾರಿಗಳ ತಂಡ ಪತ್ತೆ ಹಚ್ಚಿದ್ದು ಮರವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಜನತಾ ಕಾಲೊನಿ ನಿವಾಸಿ ಹಾರಿಸ್ ಎಂಬವರ ಮನೆಯಲ್ಲಿ ದಾಸ್ತಾನು ಇರಿಸಿದ್ದ ಬಗ್ಗೆ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಸಿಬ್ಬಂದಿ 15 ಸೈಜ್ ವಶಕ್ಕೆ ಪಡೆದುಕೊಂಡಿದ್ದಾರೆ. ಮರದ ಮೌಲ್ಯ ₹ 40 ಸಾವಿರ ಎಂದು ಅಂದಾಜಿಸಲಾಗಿದ್ದು ಆರೋಪಿಯನ್ನು ಬಂಧಿಸಲಾಗಿದೆ ಎಂದು ವಲಯ ಅರಣ್ಯಾಧಿಕಾರಿ ಕಿರಣ್ ತಿಳಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT