ADVERTISEMENT

ನೀರಿನಲ್ಲಿ ಮುಳುಗಿ ಯುವಕ ಸಾವು

​ಪ್ರಜಾವಾಣಿ ವಾರ್ತೆ
Published 19 ಮೇ 2020, 15:46 IST
Last Updated 19 ಮೇ 2020, 15:46 IST

ಮಂಗಳೂರು: ಬಜ್ಪೆ ಪೊಲೀಸ್ ಠಾಣೆ ವ್ಯಾಪ್ತಿಯ ಆದ್ಯಪಾಡಿಯ ಜಲಾಶಯದಲ್ಲಿ ಮುಳುಗಿ ಯುವಕನೊಬ್ಬ ಮೃತಪಟ್ಟಿದ್ದಾನೆ.

ಗುರುಪುರ ಸಮೀಪದ ಮಾಲಿಕ್ (17) ಮೃತಪಟ್ಟ ಯುವಕ. ಮಂಗಳವಾರ ಮಧ್ಯಾಹ್ನ ಈತ ತನ್ನ ಸ್ನೇಹಿತರ ಜತೆ ಸೇರಿ ಆದ್ಯಪಾಡಿ ಡ್ಯಾಂ ಬಳಿ ತೆರಳಿದ್ದ. ಈ ಸಂದರ್ಭ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಈ ಬಗ್ಗೆ ಬಜ್ಪೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT