ADVERTISEMENT

ಧರ್ಮಸ್ಥಳದಲ್ಲಿ ಅಪರಾಧ ಕೃತ್ಯ ಕುರಿತ ಆರೋಪ | ಪ್ರತ್ಯೇಕ ತನಿಖೆ: ಎಸ್‌ಪಿ

​ಪ್ರಜಾವಾಣಿ ವಾರ್ತೆ
Published 12 ಜುಲೈ 2025, 4:53 IST
Last Updated 12 ಜುಲೈ 2025, 4:53 IST
   

ಮಂಗಳೂರು: ‘ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಅಪರಾಧ ಕೃತ್ಯಗಳು ನಡೆದಿವೆ’ ಎಂದು ವಕೀಲರ ಮೂಲಕ ಪೊಲೀಸರಿಗೆ ದೂರು ನೀಡಿದ್ದ ವ್ಯಕ್ತಿ, ಶುಕ್ರವಾರ ಬೆಳ್ತಂಗಡಿ ಪ್ರಧಾನ ಸಿವಿಲ್ ನ್ಯಾಯಾಧೀಶ ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿ ಸಂದೇಶ್ ಕೆ. ಅವರ ಮುಂದೆ ಹಾಜರಾಗಿದ್ದಾರೆ.

‘ಪ್ರಕರಣಕ್ಕೆ ಸಂಬಂಧಿಸಿ ದೂರು ದಾರರ ರಕ್ಷಣೆಯ ಉದ್ದೇಶದಿಂದ ಅವರ ಗುರುತು ಬಹಿರಂಗಪಡಿಸದಿರಲು ನಿರ್ಧರಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಬಂಟ್ವಾಳ ಡಿವೈಎಸ್‌ಪಿ ನೇತೃತ್ವದಲ್ಲಿ ಪ್ರತ್ಯೇಕ ತನಿಖೆ ಆರಂಭಿಸಲಾಗಿದೆ’ ಎಂದು ಜಿಲ್ಲಾ ಎಸ್‌ಪಿ ತಿಳಿಸಿದ್ದಾರೆ.

‘ದೂರುದಾರರು ಸ್ವತಃ ಹೊರ ತೆಗೆದಿರುವುದಾಗಿ ತಿಳಿಸಿರುವ ಅಸ್ಥಿ ಪಂಜರದ ಅವಶೇಷ ಹಾಜರುಪ ಡಿಸಿದ್ದಾರೆ. ಅವುಗಳನ್ನು ಸಾಕ್ಷಿ ದೂರುದಾರರ ಪರ ವಕೀಲರು, ಪಂಚರ ಸಮ್ಮುಖದಲ್ಲಿ ಸ್ವಾಧೀನ‌ ಪಡಿಸಿಕೊಳ್ಳಲಾಗಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು’ ಎಂದು ಮಾಹಿತಿ ನೀಡಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.