ADVERTISEMENT

ಮೂಡುಬಿದಿರೆ: ನಾಳೆ ಅಖಿಲ ಭಾರತ ಕ್ರಾಸ್ ಕಂಟ್ರಿ ಚಾಂಪಿಯನ್ಷಿಪ್

​ಪ್ರಜಾವಾಣಿ ವಾರ್ತೆ
Published 4 ಅಕ್ಟೋಬರ್ 2019, 13:10 IST
Last Updated 4 ಅಕ್ಟೋಬರ್ 2019, 13:10 IST

ಮೂಡುಬಿದಿರೆ: ಮಂಗಳೂರು ವಿಶ್ವವಿದ್ಯಾಲಯ ಮತ್ತು ಆಳ್ವಾಸ್ ಕಾಲೇಜು ಜಂಟಿ ಅಶ್ರಯದಲ್ಲಿ ಭಾನುವಾರದಂದು ಇಲ್ಲಿ ಅಖಿಲ ಭಾರತ ಅಂತರವಿಶ್ವವಿದ್ಯಾಲಯ ಪುರುಷರ ಕ್ರಾಸ್ ಕಂಟ್ರಿ ಚಾಂಪಿಯನ್ಷಿಪ್ ನಡೆಯಲಿದೆ.

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಅಳ್ವ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

‘ಭಾರತೀಯ ವಿಶ್ವವಿದ್ಯಾಲಯಗಳ ನಿರ್ದೇಶನದಲ್ಲಿ ನಡೆಯುವ ಸ್ಪರ್ಧೆಯಲ್ಲಿ ದೇಶದ 175 ವಿಶ್ವವಿದ್ಯಾಲಯಗಳಿಂದ 1600 ಕ್ರೀಡಾಪಟುಗಳು ಭಾಗವಹಿಸುವ ನಿರೀಕ್ಷೆಯಿದೆ. ಬೆಳಿಗ್ಗೆ 7ಕ್ಕೆ ನಿಶ್ಮಿತಾ ಟವರ್ಸ್ ಬಳಿಯಿಂದ ಆರಂಭವಾಗುವ ಸ್ಪರ್ಧೆ ಮಹಾವೀರ ಕಾಲೇಜು, ಜೈನ್ ಕಾಲೇಜು, ಅಲಂಗಾರು ಮಾರ್ಗವಾಗಿ ಸ್ವರಾಜ್ಯ ಮೈದಾನದವರೆಗೆ 10 ಕಿ.ಮೀ. ದೂರ ಕ್ರಮಿಸಿ ಮುಕ್ತಾಯಗೊಳ್ಳಲಿದೆ’ ಎಂದರು.

ADVERTISEMENT

‘ಡಿಜಿಟಲ್ ಕಾಲಮಾಪನ, ಅತ್ಯಾಧುನಿಕ ಟ್ರಾನ್ಸ್‌ಪಾಂಡರ್ ವ್ಯವಸ್ಥೆಯನ್ನು ಅಳವಡಿಸಲಾಗಿದೆ . ಆಳ್ವಾಸ್ ಸಂಸ್ಥೆ ಮೂರನೇ ಬಾರಿ ಕೂಟವನ್ನು ಆಯೋಜಿಸುತ್ತಿದೆ. ಅಖಿಲ ಭಾರತ ಅಂತರವಿಶ್ವವಿದ್ಯಾಲಯ ಕ್ರಾಸ್‌ಕಂಟ್ರಿ ಕ್ರೀಡಾ ಕೂಟದ ಪುರುಷರ ವಿಭಾಗದಲ್ಲಿ ಸತತ ನಾಲ್ಕು ವರ್ಷಗಳಿಂದ ಮಂಗಳೂರು ವಿಶ್ವವಿದ್ಯಾಲಯ ಚಾಂಪಿಯನ್ಶಿಪ್ ಗೆದ್ದುಕೊಂಡಿದೆ ಎಂದರು. ಮಂಗಳೂರು ವಿಶ್ವವಿದ್ಯಾಲಯದ ಕ್ರೀಡಾ ವಿಭಾಗ ನಿರ್ದೇಶಕ ಡಾ.ಕಿಶೋರ್ ಕುಮಾರ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.