ADVERTISEMENT

ಕ್ರಿಪ್ಟೊ ಕರೆನ್ಸಿ ಅವ್ಯವಹಾರ: ಆರೋಪಿ ಸೆೆರೆ

​ಪ್ರಜಾವಾಣಿ ವಾರ್ತೆ
Published 20 ಮಾರ್ಚ್ 2023, 12:07 IST
Last Updated 20 ಮಾರ್ಚ್ 2023, 12:07 IST
   

ಮಂಗಳೂರು: ಕ್ರಿಪ್ಟೊ ಕರೆನ್ಸಿಯಲ್ಲಿ ಹೂಡಿಕೆ ಮಾಡಿ ಲಾಭ ಗಳಿಸಬಹುದು ಎಂದು ನಂಬಿಸಿ ಹಲವಾರು ಮಂದಿಯಿಂದ ಕೋಟ್ಯಾಂತರ ರೂಪಾಯಿ ಹಣ ಪಡೆದು ವಂಚನೆ ನಡೆಸಿದ ಪ್ರಕರಣದ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

‘ಕೇರಳದ ಮಲಪ್ಪುರ ಜಿಲ್ಲೆಯ ಒತುಕುಂಗಲ್ ಕುಜ್ಜಿಪುರಂ ನಿವಾಸಿ ಹಂಝ ಸಿ.ಟಿ (24) ಬಂಧಿತ ಆರೋಪಿ. ಆತ ‌ಕ್ರಿಪ್ಟೊ ಕರೆನ್ಸಿಯಲ್ಲಿ ಹೂಡಿಕೆ ಮಾಡಿದ ಹಣಕ್ಕೆ ತಿಂಗಳಿಗೆ ಶೇ 25ರಷ್ಟು ಲಾಭಾಂಶ ನೀಡುವುದಾಗಿ ನಂಬಿಸಿ ಮಂಗಳೂರು - ಕಣ್ಣೂರು ಪರಿಸರದ ನಿವಾಸಿಯಿಂದ ಹಾಗೂ ಇತರ ಸಾರ್ವಜನಿಕರಿಂದ ಕೋಟ್ಯಂತರ ರೂಪಾಯಿಯನ್ನು ಬ್ಯಾಂಕ್‌ ಖಾತೆಗಳಿಗೆ ಹಾಕಿಸಿಕೊಂಡಿದ್ದ. ಹೂಡಿಕೆ ಮಾಡಿದವರಿಗೆ ಲಾಭಾಂಶ ನೀಡದೇ ವಂಚನೆ ಮಾಡಿದ್ದ’ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಆರೋಪಿ ಪತ್ತೆ ಕಾರ್ಯದಲ್ಲಿ ಸಿಸಿಬಿ ಎಸಿಪಿ ಪಿ.ಎ. ಹೆಗ್ಡೆ, ಪೊಲೀಸ್ ಇನ್‌ಸ್ಪೆಕ್ಟರ್ ಶ್ಯಾಮಸುಂದರ್ ಎಚ್.ಎಂ., ಪಿಎಸ್‌ಐ ರಾಜೇಂದ್ರ ಹಾಗೂ ಸಿಬ್ಬಂದಿ ಪಾಲ್ಗೊಂಡಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.