ADVERTISEMENT

ಸಿರಿಬಾಗಿಲು: ಕಲಾ-ಸಾಂಸ್ಕೃತಿಕ ವೈಭವ ಆರಂಭ

​ಪ್ರಜಾವಾಣಿ ವಾರ್ತೆ
Published 29 ಜೂನ್ 2022, 15:15 IST
Last Updated 29 ಜೂನ್ 2022, 15:15 IST
ಶ್ರೀ ಆಂಜನೇಯ ಮಹಿಳಾ ಯಕ್ಷಗಾನ ಸಂಘದವರು ‘ಶ್ರೀರಾಮ ಪಟ್ಟಾಭಿಷೇಕ’ ಯಕ್ಷಗಾನ ತಾಳಮದ್ದಳೆ ನಡೆಸಿಕೊಟ್ಟರು.
ಶ್ರೀ ಆಂಜನೇಯ ಮಹಿಳಾ ಯಕ್ಷಗಾನ ಸಂಘದವರು ‘ಶ್ರೀರಾಮ ಪಟ್ಟಾಭಿಷೇಕ’ ಯಕ್ಷಗಾನ ತಾಳಮದ್ದಳೆ ನಡೆಸಿಕೊಟ್ಟರು.   

ಸಿರಿಬಾಗಿಲು: ಇಲ್ಲಿನ ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನ ನಿರ್ಮಿಸುತ್ತಿರುವ ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಭವನದ ಉದ್ಘಾಟನೆಯ ಅಂಗವಾಗಿ ಆಯೋಜಿಸಿರುವ ಕಲಾ ಸಾಂಸ್ಕೃತಿಕ ಮತ್ತು ಸಾಹಿತ್ಯಕ ಸಂಭ್ರಮಕ್ಕೆ ಈಚೆಗೆ ಚಾಲನೆ ಲಭಿಸಿತು.

ಪ್ರತಿ ತಿಂಗಳ ಎರಡನೇ ಶನಿವಾರ ಮತ್ತು ಭಾನುವಾರ ನಡೆಯಲಿರುವ ಕಾರ್ಯಕ್ರಮಗಳನ್ನು ಧರ್ಮದರ್ಶಿ ಹರಿಕೃಷ್ಣ ಪುನರೂರು ಉದ್ಘಾಟಿಸಿದರು. ಕರಾವಳಿಯ ಯಕ್ಷಗಾನ ಉಳಿಸಿ ಬೆಳೆಸಬೇಕಾಗಿದೆ ಎಂದು ಅವರು ಹೇಳಿದರು. ಅಧ್ಯಕ್ಷತೆ ವಹಿಸಿದ್ದ ತಲ್ಲೂರು ಶಿವರಾಮ ಶೆಟ್ಟಿ ಮಾತನಾಡಿ ಸಾಧಕ ಕಲಾವಿದರ ಮಾಹಿತಿ ದಾಖಲಿಸುವ ಅಗತ್ಯವಿದೆ ಎಂದರು.

ಪ್ರಸಂಗಕರ್ತ ಶ್ರೀಧರ ಡಿ.ಎಸ್, ರಂಗಸ್ಥಳ ಫೌಂಡೇಷನ್ ಅಧ್ಯಕ್ಷ ವಿ.ರಾಘವೇಂದ್ರ ಉಡುಪ, ಪ್ರತಿಷ್ಠಾನದ ಅಧ್ಯಕ್ಷ ರಾಮಕೃಷ್ಣ ಮಯ್ಯ ಇದ್ದರು. ರಾಜರಾಮರಾವ್ ಮೀಯಪದವು ನಿರೂಪಿಸಿದರು. ಜಗದೀಶ ಕೆ. ಕೂಡ್ಲು ವಂದಿಸಿದರು. ಶ್ರೀ ಆಂಜನೇಯ ಮಹಿಳಾ ಯಕ್ಷಗಾನ ಸಂಘದವರು ‘ಶ್ರೀರಾಮ ಪಟ್ಟಾಭಿಷೇಕ’ ಯಕ್ಷಗಾನ ತಾಳಮದ್ದಳೆ ನಡೆಸಿಕೊಟ್ಟರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.