ಮುಡಿಪು: ಮಂಗಳೂರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಕ್ಷೇಮಪಾಲನಾ ನಿರ್ದೇಶನಾಲಯದ ವತಿಯಿಂದ ಕ್ಯಾಂಪಸ್‌ನ ವಿದ್ಯಾರ್ಥಿಗಳಿಗೆ ಓರಿಯಂಟೇಶನ್ ಕಾರ್ಯಕ್ರಮ ಹಾಗೂ ರ್‍ಯಾಗಿಂಗ್, ಮಾದಕ ವ್ಯಸನ ವಿರೋಧಿ ಮತ್ತು ಸೈಬರ್ ಭದ್ರತೆಯ ಕುರಿತು ಜಾಗೃತಿ ಕಾರ್ಯಕ್ರಮ ಮಂಗಳಾ ಸಭಾಂಗಣದಲ್ಲಿ ನಡೆಯಿತು.
ಕೊಣಾಜೆ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ನಾಗರಾಜ ಎಸ್. ಮಾತನಾಡಿ, ರ್‍ಯಾಗಿಂಗ್‌ನಿಂದಾಗಿ ಆತಂಕ, ಖಿನ್ನತೆ, ಅಥವಾ ದೀರ್ಘಕಾಲದ ಮಾನಸಿಕ ಪರಿಣಾಮಗಳು ಉಂಟಾಗುತ್ತವೆ. ರ್‍ಯಾಗಿಂಗ್ ಮಾಡುವುದು ಗಮನಕ್ಕೆ ಬಂದರೆ ತಕ್ಷಣ ವಿಶ್ವವಿದ್ಯಾನಿಲಯದ ಅಧಿಕಾರಿಗಳಿಗೆ, ರ್‍ಯಾಗಿಂಗ್ ವಿರೋಧಿ ಸಮಿತಿ ಅಥವಾ ಪೊಲೀಸರಿಗೆ ಮಾಹಿತಿ ನೀಡಬೇಕು ಎಂದರು.
ಇತ್ತೀಚಿನ ವರ್ಷಗಳಲ್ಲಿ ಸೈಬರ್ ಕ್ರೈಂಗೆ ವಿದ್ಯಾವಂತರು ಮತ್ತು ವೃತ್ತಿಪರರೂ ಸಿಲುಕುತ್ತಿದ್ದಾರೆ. ಅಪರಿಚಿತ ಲಿಂಕ್‌ಗಳ ಮೇಲೆ ಕ್ಲಿಕ್ ಮಾಡಬಾರದು ಎಂದು ಮಾಹಿತಿ ನೀಡಿದರು.
ಮಂಗಳೂರು ವಿವಿ ಕುಲಪತಿ ಪ್ರೊ.ಪಿ.ಎಲ್.ಧರ್ಮ ಅಧ್ಯಕ್ಷತೆ ವಹಿಸಿದ್ದರು.
ವಿದ್ಯಾರ್ಥಿ ಕ್ಷೇಮಪಾಲನಾ ನಿರ್ದೇಶನಾಲಯದ ನಿರ್ದೇಶಕ ಪ್ರಶಾಂತ ನಾಯ್ಕ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.
ವಿಶ್ವವಿದ್ಯಾಲಯದ ಎಂಪ್ಲಾಯ್‌ಮೆಂಟ್ ಬ್ಯೂರೊದ ಮುಖ್ಯಸ್ಥ ದಶರಥ ಪಿ.ಅಂಗಡಿ ವೃತ್ತಿ ಮಾರ್ಗದರ್ಶನ ನೀಡಿದರು. ಡಿಎಸ್‌ಟಿ ಪರ್ಸ್ ಲ್ಯಾಬ್‌ನಲ್ಲಿ ಲಭ್ಯವಿರುವ ಆಧುನಿಕ ಸೌಲಭ್ಯಗಳ ಬಗ್ಗೆ ಪ್ರೊ.ವಿಶಾಲಾಕ್ಷಿ ಬಿ.ಅವರು ಮಾಹಿತಿ ನೀಡಿದರು. ಲವೀನಾ ಕೆ.ಬಿ. ಕಾರ್ಯಕ್ರಮ ನಿರೂಪಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.