ADVERTISEMENT

ಪಾಲಿಕೆ ಸದಸ್ಯೆಗೆ ವಾಟ್ಸ್ ಆ್ಯಪ್‌ನಲ್ಲಿ ಕಿರುಕುಳ: ಬಂಧನ

​ಪ್ರಜಾವಾಣಿ ವಾರ್ತೆ
Published 12 ಫೆಬ್ರುವರಿ 2020, 15:13 IST
Last Updated 12 ಫೆಬ್ರುವರಿ 2020, 15:13 IST

ಸುರತ್ಕಲ್: ಮಂಗಳೂರು ಮಹಾನಗರಪಾಲಿಕೆಯ ಚುನಾಯಿತ ಸದಸ್ಯೆಯೊಬ್ಬರಿಗೆ ವಾಟ್ಸ್‌ ಆ್ಯಪ್ ಮೂಲಕ ಅಶ್ಲೀಲ ಸಂದೇಶ ಹಾಗೂ ಚಿತ್ರಗಳ ಮೂಲಕ ಮಾನಸಿಕ ಕಿರುಕುಳ ನೀಡಿದ ಅರೋಪದಲ್ಲಿ ಮುಡಿಪು ನಿವಾಸಿಯನ್ನು ಬಂಧಿಸಲಾಗಿದೆ.

ಭರತ್ ಶೆಟ್ಟಿ(32) ಎಂಬಾತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಪತ್ರಿಕೆಯಲ್ಲಿ ಬಂದ ಮೊಬೈಲ್ ಸಂಖ್ಯೆಗೆ ಸಂದೇಶ ಕಳಿಸುತ್ತಿದ್ದ ಎಂದು ತನಿಖೆಯಿಂದ ತಿಳಿದು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT