ADVERTISEMENT

ಮುಂಡಾಜೆ: ಸೈಬರ್ ಅಪರಾದ ಜಾಗೃತಿ ಕಾರ್ಯಕ್ರಮ 

​ಪ್ರಜಾವಾಣಿ ವಾರ್ತೆ
Published 31 ಡಿಸೆಂಬರ್ 2024, 14:11 IST
Last Updated 31 ಡಿಸೆಂಬರ್ 2024, 14:11 IST
ಮುಂಡಾಜೆ ಕಾಲೇಜಿನಲ್ಲಿ ಸೈಬರ್ ಅಪರಾಧ ಜಾಗೃತಿ ಕಾರ್ಯಕ್ರಮ ನಡೆಯಿತು
ಮುಂಡಾಜೆ ಕಾಲೇಜಿನಲ್ಲಿ ಸೈಬರ್ ಅಪರಾಧ ಜಾಗೃತಿ ಕಾರ್ಯಕ್ರಮ ನಡೆಯಿತು   

ಬೆಳ್ತಂಗಡಿ: ‘ಇಂದು ಸೈಬರ್ ಅಪರಾಧ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದ್ದು, ಈ ಬಗ್ಗೆ ಎಚ್ಚರ ವಹಿಸಬೇಕು. ವಿದ್ಯಾರ್ಥಿಗಳಲ್ಲಿ ಈ ಕುರಿತ ಜಾಗೃತಿ ಅಗತ್ಯ’ ಎಂದು ಡಿವೈಎಸ್ ಪಿ ಮಂಜನಾಥ ಬಿ.ಜಿ. ಹೇಳಿದರು.

ಬೆಳ್ತಂಗಡಿ ರೋಟರಿ ಕ್ಲಬ್, ದಕ್ಷಿಣ ಕನ್ನಡ ಜಿಲ್ಲಾ ಸೆನ್ ಪೊಲೀಸ್ ಠಾಣೆ, ಮುಂಡಾಜೆ ಗ್ರಾಮ ಪಂಚಾಯಿತಿ, ಮುಂಡಾಜೆ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ‘ಸೈಬರ್ ಅಪರಾಧ ಜಾಗೃತಿ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಎಸ್.ಐ. ಮಂಜುನಾಥ ಟಿ., ಇತ್ತೀಚಿನ ದಿನಗಳಲ್ಲಿ ಸೈಬರ್ ಅಪರಾಧಗಳಿಗೆ ವಿದ್ಯಾವಂತರೂ ಬಲಿಯಾಗುತ್ತಿದ್ದಾರೆ ಎಂದರು. ಸೈಬರ್ ಅಪರಾಧ ಹಾಗೂ ಅದನ್ನು ತಡೆಗಟ್ಟುವ ಬಗ್ಗೆ ಮಾಹಿತಿ ನೀಡಿ ಜಾಗೃತಿ ಮೂಡಿಸಿದರು.

ADVERTISEMENT

ರೋಟರಿ ಕ್ಲಬ್ ಬೆಳ್ತಂಗಡಿಯ ಕಾರ್ಯದರ್ಶಿ ಸಂದೇಶ ರಾವ್, ಮೇಜರ್ ಜನರಲ್ ಎಂ.ವಿ.ಭಟ್, ಮುಂಡಾಜೆ ಪಿಡಿಒ ಗಾಯತ್ರಿ ಟಿ., ಮುಂಡಾಜೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಸುಮಲತಾ, ಮುಂಡಾಜೆ ಕಾಲೇಜಿನ ಇತಿಹಾಸ ಉಪನ್ಯಾಸಕಿ ಗೀತಾ ಭಾಗವಹಿಸಿದ್ದರು.

ವಿದ್ಯಾರ್ಥಿ ಲತೇಶ್ ಕಾರ್ಯಕ್ರಮ ನಿರ್ವಹಿಸಿದರು. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಕಾರ್ಯಕ್ರಮಾಧಿಕಾರಿ ನಮಿತಾ ಕೆ.ಆರ್.ಸ್ವಾಗತಿಸಿ, ಛಾಯಾ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.