ADVERTISEMENT

ಸೈಬರ್ ವಂಚನೆ: ಪ್ರಕರಣ ದಾಖಲು

​ಪ್ರಜಾವಾಣಿ ವಾರ್ತೆ
Published 6 ಜುಲೈ 2022, 3:54 IST
Last Updated 6 ಜುಲೈ 2022, 3:54 IST

ಮಂಗಳೂರು: ಉಡುಗೊರೆ ಕಳುಹಿಸುವುದಾಗಿ ನಂಬಿಸಿದ ವ್ಯಕ್ತಿಯೊಬ್ಬ ಸೈಬರ್ ಜಾಲದ ಮೂಲಕ ಕಾಲೇಜು ವಿದ್ಯಾರ್ಥಿಗೆ ವಂಚಿಸಿದ ಸಂಬಂಧ ಮಂಗಳೂರು ಸೆನ್ (ಸೈಬರ್ ಆರ್ಥಿಕ ಮತ್ತು ಮಾದಕ ವಿಭಾಗ) ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಗರದಲ್ಲಿ ಫಿಸಿಯೊಥೆರಪಿ ಓದುತ್ತಿರುವ ವಿದ್ಯಾರ್ಥಿಗೆ ಅಪರಿಚಿತ ವ್ಯಕ್ತಿಯು ಇನ್‌ಸ್ಟಾ ಗ್ರಾಂನಲ್ಲಿ ಡಾ. ಪ್ರಿನ್ಸ್‌ ಎಂಬ ಹೆಸರಿನಲ್ಲಿ ಪರಿಚಯಿಸಿಕೊಂಡಿದ್ದು, ವಾಟ್ಸ್‌ಆ್ಯಪ್ ಸಂಖ್ಯೆ ಮೂಲಕ ನಿರಂತರ ಸಂಪರ್ಕದಲ್ಲಿದ್ದ ಎನ್ನಲಾಗಿದೆ. ತಾನು ಉಡುಗೊರೆ ಕಳುಹಿಸುವುದಾಗಿ ನಂಬಿಸಿದ ವ್ಯಕ್ತಿಯು, ಸೇವಾ ಶುಲ್ಕ ಪಾವತಿಸುವಂತೆ ಹೇಳಿದ್ದು, ವಿದ್ಯಾರ್ಥಿಯು ಮೇ 3ರಿಂದ 5ರ ಅವಧಿಯಲ್ಲಿ ಹಂತ ಹಂತವಾಗಿ ₹ 1.85 ಲಕ್ಷ ಮೊತ್ತವನ್ನು ಗೂಗಲ್‌ ಪೇ ಮೂಲಕ ಪಾವತಿಸಿದ್ದಾರೆ. ಆ ನಂತರ ಆ ವ್ಯಕ್ತಿಯು ಯಾವುದೇ ಉಡುಗೊರೆ ನೀಡದೆ ವಂಚಿಸಿದ್ದಾನೆ ಎಂದು ಸೆನ್ ಠಾಣೆಯಲ್ಲಿ ದಾಖಲಾದ ಪ್ರಕರಣದಲ್ಲಿ ತಿಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT