ADVERTISEMENT

ಸೈನೈಡ್‌ ಮೋಹನ್‌ಗೆ ಮರಣದಂಡನೆ

18ನೇ ಕೊಲೆ ಮತ್ತು ಅತ್ಯಾಚಾರ ಪ್ರಕರಣದ ಶಿಕ್ಷೆ ಪ್ರಮಾಣ ಪ್ರಕಟ

​ಪ್ರಜಾವಾಣಿ ವಾರ್ತೆ
Published 27 ನವೆಂಬರ್ 2019, 16:30 IST
Last Updated 27 ನವೆಂಬರ್ 2019, 16:30 IST

ಮಂಗಳೂರು: ಸರಣಿ ಹಂತಕ ಸೈನೈಡ್‌ ಮೋಹನ್‌ಗೆ 18ನೇ ಯುವತಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ನಗರದ ಆರನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಮರಣದಂಡನೆ ಶಿಕ್ಷೆ ವಿಧಿಸಿದೆ.

ಕೇರಳದ ಕಾಸರಗೋಡು ಜಿಲ್ಲೆ ಬದಿಯಡ್ಕ ಸಮೀಪದ ಕಯ್ಯಾರ ಗ್ರಾಮದ ಪೈವಳಿಕೆ ನಿಯಾಸಿಯಾಗಿದ್ದ ಯುವತಿಯ ಕೊಲೆ ಪ್ರಕರಣದ ವಿಚಾರಣೆಯನ್ನು ಶುಕ್ರವಾರವೇ ಪೂರ್ಣಗೊಳಿಸಿದ್ದ ನ್ಯಾಯಾಧೀಶೆ ಸಯೀದುನ್ನೀಸಾ ಅವರು, ‘ಮೋಹನ್‌ ಅಪರಾಧಿ’ ಎಂದು ಸಾರಿದ್ದರು. ಶಿಕ್ಷೆ ಪ್ರಮಾಣಕ್ಕೆ ಸಂಬಂಧಿಸಿದಂತೆ ಎರಡೂ ಕಡೆಯ ವಾದ ಆಲಿಸಿದ ಅವರು, ಬುಧವಾರ ಆದೇಶ ಪ್ರಕಟಿಸಿದರು.

ಮೋಹನ್‌ ವಿರುದ್ಧ ಒಟ್ಟು 20 ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳಿವೆ. ಈವರೆಗೆ 18 ಪ್ರಕರಣಗಳ ವಿಚಾರಣೆ ಪೂರ್ಣಗೊಂಡಿದೆ. ಈ ಹಿಂದೆ ನಾಲ್ಕು ಪ್ರಕರಣಗಳಲ್ಲಿ ಮರಣದಂಡನೆ ಮತ್ತು 13 ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆ ವಿಧಿಸಲಾಗಿತ್ತು. ಈಗ ಐದನೇ ಪ್ರಕರಣದಲ್ಲಿ ಮರಣದಂಡನೆ ಶಿಕ್ಷೆಯಾಗಿದೆ. ಈ ಪ್ರಕರಣದಲ್ಲಿ ವಿವಿಧ ಅಪರಾಧಗಳಿಗೆ ಒಟ್ಟು ₹ 30,000 ದಂಡವನ್ನೂ ವಿಧಿಸಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.