
ಉಜಿರೆ: ಧ್ಯಾನವು ಉನ್ನತ ಸಾಧನೆಗೆ ನೆರವಾಗುತ್ತದೆ. ಎಲ್ಲ ಸಮಸ್ಯೆಗಳೂ ಪರಿಹಾರವಾಗುತ್ತವೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಹೇಳಿದರು.
ಬೆಂಗಳೂರಿನ ವಿಶ್ವ ಚೈತನ್ಯ ಕ್ವಾಂಟಮ್ ಫೌಂಡೇಷನ್ ನೇತೃತ್ವದಲ್ಲಿ ಧರ್ಮಸ್ಥಳದಲ್ಲಿ ಹಮ್ಮಿಕೊಂಡಿದ್ದ ಧ್ಯಾನ ಮಹಾಯಜ್ಞದ ಸಮಾರೋಪದಲ್ಲಿ ಅವರು ಮಾತನಾಡಿದರು.
ಸಾಯಿಕೀರ್ತಿನಾಥ ಸ್ವಾಮೀಜಿ, ಪ್ರಕಾಶಬಾಬು, ವಿನುತಾ ಕೆ., ಶಿವರಾಮಪ್ಪ, ಶ್ರೀನಿವಾಸ್, ಮನೋರಮಾ, ದಿವ್ಯಾ, ಬ್ರಹ್ಮರ್ಷಿ ಪ್ರೇಮನಾಥ್, ಪದ್ಮಾ, ವಿಶಾಲಾಕ್ಷಿ, ಯೋಗಮಿತ್ರ ಸುಬ್ಬು ಭಯ್ಯ, ಲಿಂಗನಗೌಡ ಬಳ್ಳಾರಿ, ಧರ್ಮಸ್ಥಳದ ಶಾಂತಿವನ ಟ್ರಸ್ಟ್‌ನ ಯೋಗ ನಿರ್ದೇಶಕ ಡಾ.ಶಶಿಕಾಂತ ಜೈನ್ ಮಾಹಿತಿ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.