ADVERTISEMENT

ಸಮನ್ವಯ; ಸರ್ಕಾರಿ ಶಾಲೆ ಉಳಿಸಲು ಸಾಧ್ಯ

ಎಸ್.ಡಿ.ಎಂ.ಸಿ. ಸಮನ್ವಯ ವೇದಿಕೆ ಜಿಲ್ಲಾ ಮಟ್ಟದ ಸಮಾವೇಶ 

​ಪ್ರಜಾವಾಣಿ ವಾರ್ತೆ
Published 1 ಮಾರ್ಚ್ 2023, 4:50 IST
Last Updated 1 ಮಾರ್ಚ್ 2023, 4:50 IST
 ಜಿಲ್ಲಾ ಮಟ್ಟದ ದ್ವಿತೀಯ ಸಮಾವೇಶದಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶೋಭಾ ಬಿ.ಜಿ ವಿಜ್ಞಾಪನಾ ಪತ್ರ ಬಿಡುಗಡೆಗೊಳಿಸಿದರು
 ಜಿಲ್ಲಾ ಮಟ್ಟದ ದ್ವಿತೀಯ ಸಮಾವೇಶದಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶೋಭಾ ಬಿ.ಜಿ ವಿಜ್ಞಾಪನಾ ಪತ್ರ ಬಿಡುಗಡೆಗೊಳಿಸಿದರು   

ವಿಟ್ಲ: ಸರ್ಕಾರಿ ಶಾಲೆಗಳು ಸಮಸ್ಯೆಗಳ ನಡುವೆ ಮುನ್ನಡೆಯುತ್ತಿವೆ. ಸರ್ಕಾರಿ ಶಾಲೆಗಳಲ್ಲಿ ಸೌಲಭ್ಯಗಳು ಸಿಗುತ್ತಿಲ್ಲ ಎಂಬ ಮನೋಭಾವನೆ ಇದೆ. ಎಲ್ಲರೂ ಜತೆಯಲ್ಲಿ ಕೆಲಸ ಮಾಡಿದಾಗ ಶಾಲೆಗಳನ್ನು ಉಳಿಸಲು ಸಾಧ್ಯವಾಗುತ್ತದೆ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶೋಭಾ ಬಿ.ಜಿ. ಹೇಳಿದರು.

ನೇರಳಕಟ್ಟೆ ಜನಪ್ರಿಯ ಗಾರ್ಡನ್‌ನಲ್ಲಿ ಕರ್ನಾಟಕ ರಾಜ್ಯ ಎಸ್.ಡಿ.ಎಂ.ಸಿ. ಸಮನ್ವಯ ವೇದಿಕೆ ದಕ್ಷಿಣ ಕನ್ನಡ ಘಟಕ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಹಯೋಗದಲ್ಲಿ ಎಸ್.ಡಿ.ಎಂ.ಸಿ.ಯ 21ನೇ ವರ್ಷಾಚರಣೆ ಪ್ರಯುಕ್ತ ಜಿಲ್ಲಾ ಮಟ್ಟದ ಕ್ರೀಯಾಶೀಲ ಶಾಲಾಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿಗಳಿಗೆ ಅಭಿನಂದನಾ ಕಾರ್ಯಕ್ರಮ ಹಾಗೂ ಜಿಲ್ಲಾ ಮಟ್ಟದ ದ್ವಿತೀಯ ಸಮಾವೇಶವನ್ನು ಮಂಗಳವಾರ ಉದ್ಘಾಟಿಸಿ ಅವರು ಮಾತನಾಡಿದರು.

ಹೆಣ್ಮುಕ್ಕಳಿಗೆ ತೊಂದರೆ ಆದಾಗ ಠಾಣೆಗೆ ದೂರು ನೀಡುವ ಅವಶ್ಯಕತೆ ಇಲ್ಲ. ಪ್ರಾಧಿಕಾರದ ಮೂಲಕ ದೂರ ಸಲ್ಲಿಸಬಹುದು ಎಂದರು.

ADVERTISEMENT

ಶಿಕ್ಷಣ ತಜ್ಞ ಡಾ. ನಿರಂಜನಾರಾಧ್ಯ ವಿ.ಪಿ. ಮಾತನಾಡಿ, ಸರ್ಕಾರಿ ಶಾಲೆಗಳು ಮೂಲ ಸೌಲಭ್ಯಗಳು ವಂಚಿತವಾಗಿವೆ. ಶಿಕ್ಷಣ ಹಕ್ಕು ಕಾಯ್ದೆಯಲ್ಲಿ ಉಲ್ಲೇಖಿಸಿದ ಸೌಲಭ್ಯಗಳು ದೊರೆಯುತ್ತಿಲ್ಲ. ಸರ್ಕಾರಿ ಶಾಲೆಗಳು ಉಳಿಯ ಬೇಕಾದರೆ ಶಿಕ್ಷಕರು ಬೇಕು. ಮೂರು ವರ್ಷಗಳಲ್ಲಿ ಶಿಕ್ಷಕರ ಸಂಖ್ಯೆ ಕಡಿಮೆಯಾಗಿದೆ ಎಂದರು.

ಎಸ್.ಡಿ.ಎಂ.ಸಿ. ಜಿಲ್ಲಾ ಸಮಾವೇಶ ಸಂಚಾಲಕ ಚಂದ್ರಶೇಖರ್ ಕೊಂಕಣಾಜೆ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ನಿವೃತ್ತ ಕಾರ್ಯದರ್ಶಿ ಎ. ಬಿ. ಇಬ್ರಾಹಿಂ, ಕ್ಷೇತ್ರ ಶಿಕ್ಷಣಾಧಿಕಾರಿ ಜ್ಞಾನೇಶ್, ಅಕ್ಷರ ದಾಸೋಹ ಸಮನ್ವಯಾಧಿಕಾರಿ ಉಷಾ, ಎಸ್.ಡಿ.ಎಂ.ಸಿ. ಸಮನ್ವಯ ವೇದಿಕೆ ರಾಜ್ಯಾಧ್ಯಕ್ಷ ಮೊಯಿದ್ದೀನ್ ಕುಟ್ಟಿ, ಮಾಮಚ್ಚನ್, ಬೆಳ್ತಂಗಡಿ ಸಿಆರ್‌ಪಿ ಆರತಿ, ಧಾರಾವಾಡ ಜಿಲ್ಲಾ ಘಟಕದ ಅಧ್ಯಕ್ಷ ಈರಣ್ಣ, ಚಿಕ್ಕಮಗಳೂರು ಜಿಲ್ಲಾ ಘಟಕದ ಅಧ್ಯಕ್ಷ ವಿಜಯಕುಮಾರ್, ಕೊಡಗು ಜಿಲ್ಲಾ ಘಟಕದ ಅಧ್ಯಕ್ಷ ನಾಗೇಶ್, ಚಿಕ್ಕಬಳ್ಳಾಪುರ ಜಿಲ್ಲಾ ಘಟಕದ ಅಧ್ಯಕ್ಷ ಅಶೋಕ್, ಜನಪ್ರಿಯ ಗಾರ್ಡನ್ ಉಸ್ತುವಾರಿ ಹಾಜಿ ಇಸ್ಮಾಯಿಲ್ ವಿ.ಕೆ ಇದ್ದರು.
ನೌಫಲ್ ಕೆಬಿಎಸ್ ಕುಡ್ತಮುಗೇರು ನಿರೂಪಿಸಿದರು.

ಎಸ್‌ಡಿಎಂಸಿ ಸಮನ್ವಯ ವೇದಿಕೆಯ ಜಿಲ್ಲಾ ಕಾರ್ಯದರ್ಶಿ ರಾಜೇಶ್ವರಿ ಉಬರಡ್ಕ ಸ್ವಾಗತಿಸಿದರು. ಸಮನ್ವಯ ವೇದಿಕೆಯ ಜಿಲ್ಲಾ ಘಟಕದ ಅಧ್ಯಕ್ಷ ಇಸ್ಮಾಯಿಲ್ ನೆಲ್ಯಾಡಿ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.