ADVERTISEMENT

ಮಂಗಳೂರು: ಸಮುದ್ರದಲ್ಲಿ 56 ಸ್ಥಳಗಳಲ್ಲಿ ಕೃತಕ ಬಂಡೆ

ಮೀನು ಫಸಲು ಹೆಚ್ಚಿಸಲು ಯೋಜನೆ

​ಪ್ರಜಾವಾಣಿ ವಾರ್ತೆ
Published 9 ಡಿಸೆಂಬರ್ 2023, 6:03 IST
Last Updated 9 ಡಿಸೆಂಬರ್ 2023, 6:03 IST
   

ಮಂಗಳೂರು: ಮೀನು ಫಸಲು ಹೆಚ್ಚಳಕ್ಕೆ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕರಾವಳಿಯಲ್ಲಿ 56 ಸ್ಥಳಗಳಲ್ಲಿ ಕೃತಕ ಬಂಡೆ (Artificial reef) ಗಳನ್ನು ಅಳವಡಿಸಲಾಗುವುದು.

ಇದಕ್ಕೆ ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಒಟ್ಟು ₹17.36 ಕೋಟಿ ಮಂಜೂರಾಗಿದೆ. ಇದರಲ್ಲಿ ಕರ್ನಾಟಕದ ಪಾಲು ₹6.94 ಕೋಟಿ ಹಾಗೂ ಕೇಂದ್ರದ ಪಾಲು ₹10.41 ಕೋಟಿ ಇದೆ ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಮಂಕಾಳ ಎಸ್‌.ವೈದ್ಯ ಅವರು ವಿಧಾನ ಪರಿಷತ್‌ ಸದಸ್ಯ ಕೆ.ಹರೀಶ್‌ ಕುಮಾರ್‌ ಅವರ ಪ್ರಶ್ನೆಗೆ ಉತ್ತರಿಸಿದ್ದಾರೆ.

ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಯಮಿತ ಸಂಸ್ಥೆಯನ್ನು ಅನುಷ್ಠಾನ ಏಜೆನ್ಸಿಯಾಗಿ ನೇಮಿಸಲಾಗಿದೆ. ಸಿಎಂಎಫ್‌ಆರ್‌ಐ ಸಂಸ್ಥೆಯ ವಿಜ್ಞಾನಿಗಳು ಹಾಗೂ ಸ್ಥಳೀಯ ಅಧಿಕಾರಿಗಳೊಂದಿಗೆ 3 ಜಿಲ್ಲೆಗಳ ಪಾಲುದಾರರ ಮತ್ತು ಅಧಿಕಾರಿಗಳ ಸಭೆ ನಡೆಸಿ ಈ ಕಾರ್ಯಕ್ರಮದ ಅಗತ್ಯ ಮತ್ತು ಅನುಕೂಲದ ಬಗ್ಗೆ ಜಾಗೃತಿ ಮೂಡಿಸಲಾಗಿದೆ. ಸಮುದ್ರದಲ್ಲಿ 56 ಕಡೆಗಳಲ್ಲಿ ಕೃತಕ ಬಂಡೆಗಳನ್ನು ನಿರ್ಮಿಸಿ ಅಳವಡಿಸುವ ಕಾರ್ಯ ಆರಂಭವಾಗಬೇಕಿದೆ. ಈ ವಿಧಾನ ತಮಿಳುನಾಡಿನಲ್ಲಿ ಪರಿಣಾಮಕಾರಿಯಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.