ADVERTISEMENT

‌ದಕ್ಷಿಣ ಕನ್ನಡ | ಜಿಲ್ಲೆಯ ಅಭಿವೃದ್ಧಿಗೆ ಬದ್ಧ: ದಿನೇಶ್ ಗುಂಡೂರಾವ್

ಎರಡು ಮಾಗದಲ್ಲಿ ಹೊಸ ಸಂಚಾರಕ್ಕೆ ಚಾಲನೆ

​ಪ್ರಜಾವಾಣಿ ವಾರ್ತೆ
Published 17 ಆಗಸ್ಟ್ 2025, 7:13 IST
Last Updated 17 ಆಗಸ್ಟ್ 2025, 7:13 IST
ಉಪ್ಪಿನಂಗಡಿ ಸಮೀಪ ಆಲಂಕಾರುನಲ್ಲಿ ಸಚಿವ ದಿನೇಶ್ ಗುಂಡೂರಾವ್ ಬಸ್ ಸಂಚಾರಕ್ಕೆ ಚಾಲನೆ ನೀಡಿದರು
ಉಪ್ಪಿನಂಗಡಿ ಸಮೀಪ ಆಲಂಕಾರುನಲ್ಲಿ ಸಚಿವ ದಿನೇಶ್ ಗುಂಡೂರಾವ್ ಬಸ್ ಸಂಚಾರಕ್ಕೆ ಚಾಲನೆ ನೀಡಿದರು   

ಆಲಂಕಾರು(ಉಪ್ಪಿನಂಗಡಿ):  ‘ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್‌ ಸರ್ಕಾರವು ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದೆ. ಇದೀಗ ಎರಡು ಮಾರ್ಗಗಳಿಗೆ ಸಾರಿಗೆ ಸಂಸ್ಥೆ ಬಸ್‌ ನೀಡುವ ಮೂಲಕ ಈ ಭಾಗದ ಜನರ ಬೇಡಿಕೆಯನ್ನು ಈಡೇರಿಸಲಾಗಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಆಲಂಕಾರು-ಮಾದೇರಿ-ನೆಲ್ಯಾಡಿ ಹಾಗೂ ಉಪ್ಪಿನಂಗಡಿ-ಕಡಬ-ಮಣಿಭಾಂಡ ಮಾರ್ಗದಲ್ಲಿ ನೂತನವಾಗಿ ಆರಂಭಿಸಿದ ಕೆಎಸ್ಆರ್‌ಸಿ ಬಸ್‌ ಸೇವೆಗೆ ಚಾಲನೆ ನೀಡಿ ಮಾತನಾಡಿದರು.

ಈ ಭಾಗದ ಶಾಸಕರು, ಸ್ಥಳೀಯರು, ಗ್ಯಾರಂಟಿ ಸಮಿತಿಯ ಪ್ರಮುಖರು, ಮುಖಂಡರ‌ ಒತ್ತಾಸೆಯ ಮೇರೆಗೆ ಬಸ್‌ ಸೇವೆ ಆರಂಭಿಸಲಾಗಿದೆ. ಹೆಚ್ಚುವರಿ ಬಸ್‌ಗಳನ್ನು ಒದಗಿಸಿದಾಗ ಜನ ಅದನ್ನು ಹೆಚ್ಚುಚ್ಚು ಬಳಕೆ ಮಾಡಿ ಪ್ರಯೋಜನ ಪಡೆದುಕೊಳ್ಳಬೇಕು ಎಂದರು.

ADVERTISEMENT

ಬಸ್‌ನಲ್ಲಿ ಓಡಾಟ ಮಾಡುವ ಮಹಿಳೆಯರಿಗೆ ಇದರಿಂದ ಇನ್ನಷ್ಟು ಅನುಕೂಲವಾಗುವ ಜತೆಗೆ ಹಣ ಉಳಿತಾಯ ಆಗುತ್ತದೆ. ಜಿಲ್ಲೆಯ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ಸರ್ಕಾರ ಅಭಿವೃದ್ಧಿಗೆ ಒತ್ತು ನೀಡಿ ಯೋಜನೆಗಳನ್ನು ಹಾಕಿಕೊಳ್ಳಲಾಗಿದೆ ಎಂದು ಹೇಳಿದರು.

ಶಾಸಕಿ ಭಾಗೀರಥಿ ಮುರುಳ್ಯ ಮಾತನಾಡಿ, ಆಲಂಕಾರು-ನೆಲ್ಯಾಡಿ ಬಸ್ ಸಂಚಾರಕ್ಕೆ ರಸ್ತೆ ಮಧ್ಯೆ ಎರಡುಕಡೆ ದೊಡ್ಡ ತಿರುವು ಇದ್ದು ಬಸ್‌ ಸಂಚಾರಕ್ಕೆ ತೊಂದರೆಯಾಗುವ ಜಾಗದಲ್ಲಿ ರಸ್ತೆಯನ್ನು ಅಗಲಗೊಳಿಸಿ ಬಸ್‌ ಸುಗಮ ಸಂಚಾರಕ್ಕೆ ಸಮಸ್ಯೆ ಆಗದಂತೆ ವ್ಯವಸ್ಥೆ ಮಾಡಲು ಸಂಬಂಧಿಸಿದ ಇಲಾಖೆಯ ಎಂಜಿನಿಯರ್‌ಗೆ ಸೂಚಿಸಲಾಗಿದೆ ಎಂದರು.

ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಆಶಾ ತಿಮ್ಮಪ್ಪ, ಕೆಪಿಸಿಸಿ ಸಂಯೋಜಕ ಜಿ.ಕೃಷ್ಣಪ್ಪ ರಾಮಕುಂಜ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಕಡಬ ತಾಲ್ಲೂಕು ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ, ಸದಸ್ಯ ಎ.ಕೆ.‌ಬಶೀರ್ ಆತೂರು, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ಪಿ.ಪಿ. ವರ್ಗೀಸ್, ಸರ್ವೋತ್ತಮ ಗೌಡ, ಪಕ್ಷದ ಪ್ರಮುಖರಾದ ವಿಜಯಕುಮಾರ್ ಸೊರಕೆ, ಡಾ.ರಘು, ವಿನಯರಾಜ್, ಸತೀಶ್ ಕೆಡೆಂಜಿ, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ, ಆಲಂಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಉಪಾಧ್ಯಕ್ಷದಯಾನಂದ ರೈ, ಆಲಂಕಾರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುಶೀಲ, ಪೆರಾಬೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸಂಧ್ಯಾ, ಕಡಬ ತಹಸೀಲ್ದಾರ್ ಪ್ರಭಾಕರ ಖಜೂರೆ, ಕಂದಾಯ ನಿರೀಕ್ಷಕ ಪೃಥ್ವಿರಾಜ್, ಕೆಎಸ್‌ಆರ್‌ಟಿಸಿ ಅಧಿಕಾರಿಗಳಾದ ಜೈಶಂಕರ್, ಸುಬ್ರಹ್ಮಣ್ಯ ಪ್ರಕಾಶ್, ನಿವೃತ್ತ ಅಧಿಕಾರಿ ಅಬ್ಬಾಸ್ ಕುಂತೂರು ಹಾಜರಿದ್ದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.