ADVERTISEMENT

ಉಕ್ರೇನ್‌ನಲ್ಲಿ ಸಿಲುಕಿದ್ದರೆ ನೆರವಿಗಾಗಿ ಕರೆ ಮಾಡಲು ಜಿಲ್ಲಾಧಿಕಾರಿ ಮನವಿ

​ಪ್ರಜಾವಾಣಿ ವಾರ್ತೆ
Published 24 ಫೆಬ್ರುವರಿ 2022, 10:16 IST
Last Updated 24 ಫೆಬ್ರುವರಿ 2022, 10:16 IST
   

ಮಂಗಳೂರು: ಉಕ್ರೇನ್‌ನಲ್ಲಿ ಜಿಲ್ಲೆಯ ನಾಗರಿಕರು ಸಿಲುಕಿಕೊಂಡಲ್ಲಿ ಅವರಿಗೆ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರದಿಂದ ನೆರವು ಅಗತ್ಯವಿದ್ದರೆ ಆ ಕುರಿತಂತೆ ಜಿಲ್ಲಾಡಳಿತಕ್ಕೆ ಮಾಹಿತಿ ನೀಡಲು ಕೋರಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ಕಚೇರಿಯ ಕಂಟ್ರೋಲ್ ರೂಮ್ ನಂಬರ್ 1077 ಗೆ ಕರೆ ಮಾಡಿ ಮಾಹಿತಿ ನೀಡಬಹುದಾಗಿದೆ.

ಅದೇ ರೀತಿ ಹತ್ತಿರದ ತಹಶೀಲ್ದಾರರ ಕಚೇರಿ ಹಾಗೂ ಜಿಲ್ಲಾಧಿಕಾರಿಯವರ ಕಚೇರಿಗೂ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.