ADVERTISEMENT

ಮಂಗಳೂರು: ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಕಟ

​ಪ್ರಜಾವಾಣಿ ವಾರ್ತೆ
Published 4 ಸೆಪ್ಟೆಂಬರ್ 2024, 13:13 IST
Last Updated 4 ಸೆಪ್ಟೆಂಬರ್ 2024, 13:13 IST
   

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ಮೂರು ವಿಭಾಗಗಳಲ್ಲಿ ಪ್ರಕಟಿಸಲಾಗಿದೆ. ಒಟ್ಟು 21 ಶಿಕ್ಷಕರು ಪ್ರಶಸ್ತಿಗೆ ಆಯ್ಕೆಯಾಗಿದ್ದು, ಸೆ.5ರಂದು ನಡೆಯುವ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.

ಕಿರಿಯ ಪ್ರಾಥಮಿಕ ಶಾಲಾ ವಿಭಾಗ: ಫ್ರಾನ್ಸಿಸ್ ಡೇಸಾ (ಕಂಚಿನಡ್ಕಪದವು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ), ಕರಿಯಪ್ಪ ಎ.ಕೆ (ಹುಣ್ಸೆಕಟ್ಟೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಪ್ರಭಾರಿ ಮುಖ್ಯ ಶಿಕ್ಷಕ), ರೋಸಾ ರಜನಿ ಡಿಸೋಜ (ಗಂಜಿಮಠ ಒಡ್ಡೂರು ಜಿ.ಪಂ. ಕಿರಿಯ ಪ್ರಾಥಮಿಕ ಶಾಲೆಯ ಸಹಶಿಕ್ಷಕಿ), ಡ್ರೆಸಿಲ್ ಲಿಲ್ಲಿ ಮಿನೇಜಸ್ (ಬೊಕ್ಕಪಟ್ಣ–3 ಜಿ.ಪಂ. ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಸಹಶಿಕ್ಷಕಿ), ಐಡಾ ಪಿರೇರ (ಮೂಡುಕೊಣಾಜೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸಹಶಿಕ್ಷಕಿ), ರಾಮಣ್ಣ ರೈ (ಕೈಕಾರ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ), ಕೃಷ್ಣಾನಂತ ಶರಳಾಯ ಎಂ (ದೊಡ್ಡೇರಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸಹಶಿಕ್ಷಕ).

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT