ADVERTISEMENT

ದಕ್ಷಿಣ ಕನ್ನಡ: ಧಾರಾಕಾರ ಮಳೆಗೆ ತುಂಬಿ ಹರಿಯುತ್ತಿರುವ ಕುಮಾರಧಾರಾ, ನೇತ್ರಾವತಿ

​ಪ್ರಜಾವಾಣಿ ವಾರ್ತೆ
Published 5 ಜುಲೈ 2022, 5:03 IST
Last Updated 5 ಜುಲೈ 2022, 5:03 IST
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರ ರಾತ್ರಿಯಿಂದ ಧಾರಾಕಾರ ಮಳೆ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರ ರಾತ್ರಿಯಿಂದ ಧಾರಾಕಾರ ಮಳೆ   

ಮಂಗಳೂರು: ಮಂಗಳೂರು ನಗರ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರ ರಾತ್ರಿಯಿಂದ ಧಾರಾಕಾರ ಮಳೆ ಸುರಿಯುತ್ತಿದೆ.

ಮಂಗಳೂರು ನಗರದ ಕುಲಶೇಖರ ಸಮೀಪದ ಬಜ್ಜೋಡಿ ಎಂಬಲ್ಲಿ ಮನೆಯೊಂದಕ್ಕೆ ಮಳೆ ನೀರು ನುಗ್ಗಿದೆ. ತಗ್ಗು ಪ್ರದೇಶದಲ್ಲಿ ನೀರು ನಿಂತಿದ್ದು, ನಿವಾಸಿಗಳು ತೊಂದರೆ ಅನುಭವಿಸುತ್ತಿದ್ದಾರೆ.

ನಗರದ ರಸ್ತೆಗಳಲ್ಲಿ ನೀರು ತುಂಬಿ ಹರಿಯುತ್ತಿದೆ. ಶಾಲಾ–ಕಾಲೇಜುಗಳಿಗೆ ರಜೆ ಘೋಷಿಸಿರುವುದರಿಂದ ವಾಹನ ದಟ್ಟಣೆ ಕಡಿಮೆ ಇದೆ.

ADVERTISEMENT

ಜಿಲ್ಲೆಯ ಕುಮಾರಧಾರಾ, ನೇತ್ರಾವತಿ ನದಿಗಳು ತುಂಬಿ ಹರಿಯುತ್ತಿವೆ.

ಭಾರೀ ಮಳೆಗೆ ಉಳ್ಳಾಲ ತಾಲೂಕು ವ್ಯಾಪ್ತಿಯ ಹಲವು ಪ್ರದೇಶಗಳು ಜಲಾವೃತಗೊಂಡಿವೆ. ತಲಪಾಡಿ ದೇವಿಪುರ, ಕೋಟೆಕಾರು ವೈದ್ಯನಾಥನಗರದಲ್ಲಿ ಹಲವು ಮನೆಗಳು, ರಸ್ತೆಗಳು ಜಲಾವೃತವಾಗಿವೆ.

ಮಾಡೂರು ಬಳಿ ರಸ್ತೆಗೆ ಮರ ಬಿದ್ದು ಸಂಚಾರಕ್ಕೆ ಅಡ್ಡಿಯುಂಟಾಗಿದೆ. ಬೀರಿಯಿಂದ ದೇರಳಕಟ್ಟೆ ಸಂಪರ್ಕಿಸುವ ರಸ್ತೆ ಸಂಚಾರ ಬಂದ್ ಆಗಿದ್ದು, ವಿದ್ಯುತ್ ಕೇಬಲ್ ಲೈನ್ ‌ಮೇಲೆ ಬೃಹತ್ ಮರ ಉರುಳಿ ಬಿದ್ದು ಬೆಳಿಗ್ಗಿನಿಂದ ವಿದ್ಯುತ್ ಸಂಚಾರ ವ್ಯತ್ಯಯವಾಗಿದೆ.

ಸೋಮೇಶ್ವರ ಒಂಭತ್ತುಕೆರೆಯ ಭಾಗದಲ್ಲಿಯೂ ಮನೆಗಳು ಜಲಾವೃತಗೊಂಡಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.