ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಎಡೆಬಿಡದೆ ಮಳೆಯಾಗುತ್ತಿದೆ.
ಬಂಟ್ವಾಳ ತಾಲ್ಲೂಕಿನಲ್ಲಿ ಮಳೆಯ ಅಬ್ಬರ ಜೋರಾಗಿರುವುದರಿಂದ ಈ ತಾಲ್ಲೂಕಿನ ಎಲ್ಲ ಅಂಗನವಾಡಿ ಕೇಂದ್ರಗಳು ,ಪ್ರಾಥಮಿಕ ಮತ್ತು ಪ್ರೌಢಶಾಲೆ ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ಮಂಗಳವಾರ (ಜು.15) ರಜೆ ಘೋಷಿಸಲಾಗಿದೆ ಎಂದು ಬಂಟ್ವಾಳ ತಹಶೀಲ್ದಾರರು ತಿಳಿಸಿದ್ದಾರೆ.
ಮಂಗಳೂರು ನಗರದಲ್ಲೂ ಧಾರಾಕಾರ ಮಳೆ ಸುರಿಯುತ್ತಿದೆ. ಜಿಲ್ಲೆಯಲ್ಲಿ ಜು.17ರವರೆಗೆ ಯಲ್ಲೊ ಅಲರ್ಟ್ ಘೋಷಿಸಲಾಗಿದೆ.
ಗಂಟೆಗೆ 45-55 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿರುವುದರಿಂದ ಕಡಲು ಪ್ರಕ್ಷುಬ್ಧಗೊಂಡಿದ್ದು, ಮೀನುಗಾರರು ಕಡಿಲಿಗೆ ಇಳಿಯದಂತೆ ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.