ಮದ್ಯ
(ಪ್ರಾತಿನಿಧಿಕ ಚಿತ್ರ)
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ, ಪುತ್ತೂರು, ಕಡಬ ಮತ್ತು ಸುಳ್ಯ ತಾಲ್ಲೂಕುಗಳಲ್ಲಿ ಶೇಂದಿ ಅಂಗಡಿ ಮತ್ತು ಎಲ್ಲ ಮದ್ಯದಂಗಡಿಗಳನ್ನು ಮುಚ್ಚಲು, ಎಲ್ಲ ವಿಧದ ಅಮಲು ಪದಾರ್ಥಗಳ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಮೇ 2ರಿಂದ ಮೇ 4ರ ಬೆಳಿಗ್ಗೆ 6 ಗಂಟೆಯವರೆಗೆ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿದ್ದಾರೆ.
ನಗರ ಪೊಲೀಸ್ ಕಮಿಷನರೇಟ್‌ನ ಬಜಪೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸುಹಾಸ್ ಶೆಟ್ಟಿ ಎಂಬುವವರನ್ನು ದುಷ್ಕರ್ಮಿಗಳು ಕೊಲೆ ಮಾಡಿದ್ದು, ಮೃತ ವ್ಯಕ್ತಿಯು ಬಂಟ್ವಾಳ ತಾಲ್ಲೂಕಿನ ಪುಂಜಾಲಕಟ್ಟೆ ವ್ಯಾಪ್ತಿಯವರು. ಜಿಲ್ಲೆಯಲ್ಲಿ ಪರಿಸ್ಥಿತಿಯು ಬೂದಿ ಮುಚ್ಚಿದ ಕೆಂಡದಂತಿರುವ ಕಾರಣ, ಕಿಡಿಗೇಡಿಗಳು ಅಮಲು ಪದಾರ್ಥ ಸೇವಿಸಿ ಅಹಿತಕರ ಘಟನೆಗಳಿಗೆ ಕಾರಣರಾಗಿ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ಉಂಟಾಗುವ ಸಾಧ್ಯತೆ ಇರುತ್ತದೆ.
ಈ ಕಾರಣಕ್ಕೆ ಮೇ 2ರಿಂದ ಮೇ 4ರ ಬೆಳಿಗ್ಗೆ 6 ಗಂಟೆವರೆಗೆ ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಕಡಬ ಮತ್ತು ಸುಳ್ಯ ತಾಲ್ಲೂಕುಗಳಲ್ಲಿ ಮದ್ಯದಂಗಡಿ ಮುಚ್ಚಲು ಸೂಚಿಸಲಾಗಿದೆ ಎಂದು ಆದೇಶದಲ್ಲಿ ವಿವರಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.