ADVERTISEMENT

ಕರಾವಳಿ: ಇದೇ 6ರಿಂದ ಭಾರಿ ಮಳೆ- ಹವಾಮಾನ ಇಲಾಖೆ ಮುನ್ಸೂಚನೆ

​ಪ್ರಜಾವಾಣಿ ವಾರ್ತೆ
Published 6 ಜೂನ್ 2023, 7:54 IST
Last Updated 6 ಜೂನ್ 2023, 7:54 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಮಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ರಾಜ್ಯದ ಕರಾವಳಿ ಪ್ರದೇಶದಲ್ಲಿ ಇದೇ 6ರಿಂದ 11ರವರೆಗೆ ಭಾರಿ ಮಳೆ ಯಾಗಲಿದೆ. ಸಮುದ್ರದ ಅಲೆಗಳ ಅಬ್ಬರ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ‌ ಇಲಾಖೆ‌ ಮುನ್ನೆಚ್ಚರಿಕೆ ನೀಡಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಡಳಿತ ತಿಳಿಸಿದೆ.

'ಇದೇ 6ರಿಂದ 11ರವರೆಗೆ ಭಾರಿ ಮಳೆಯಾಗುವುದರಿಂದ ಸಾರ್ವಜನಿಕರು ಮುಂಜಾಗ್ರತಾ ಕ್ರಮಗಳನ್ನು ವಹಿಸಬೇಕು. ಈ ಅವಧಿಯಲ್ಲಿ ನೀರು ನಿಲ್ಲುವ ತಗ್ಗು ಪ್ರದೇಶ, ಕರೆ, ನದಿ ತೀರ, ಸಮುದ್ರತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆವಹಿಸಬೇಕು.

ಮೀನುಗಾರರು ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಬಾರದು. ಜಿಲ್ಲಾ ಮಟ್ಟದ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿರಬೇಕು' ಎಂದು ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣೆ ಪ್ರಾಧಿಕಾರದ ಅಧ್ಯಕ್ಷರಾದ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಆದೇಶ ಮಾಡಿದ್ದಾರೆ.

ADVERTISEMENT

'ಪ್ರವಾಸಿಗರು ಹಾಗೂ ಸಾರ್ವಜನಿಕರು ನದಿ ತೀರಗಳಿಗೆ ಅಥವಾ ಸಮುದ್ರತೀರಕ್ಕೆ ತೆರಳದಂತೆ ಎಚ್ಚರಿಕೆವಹಿಸಬೇಕು. ಪ್ರಾಕೃತಿಕ ವಿಕೋಪ ಸಂಬಂಧಿಸಿದ ಯಾವುದೇ ಸಮಸ್ಯೆ ಎದುರಾದರೆ ಪರಿಹಾರಕ್ಕೆ ಸಹಾಯವಾಣಿಯನ್ನು ( 1077 ಅಥವಾ 0824 2442590) ಸಂಪರ್ಕಿಸಬಹುದು' ಎಂದು ಅವರು ಮಂಗಳವಾರ ಹೊರಡಿಸಿರುವ ಆದೇಶದಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.