ADVERTISEMENT

ಪಿಲಿಂಗಾಲು: ರಾಘವೇಂದ್ರ ಸ್ವಾಮಿ ಉತ್ಸವ ಮೂರ್ತಿ ಸಮರ್ಪಣೆ

​ಪ್ರಜಾವಾಣಿ ವಾರ್ತೆ
Published 31 ಜನವರಿ 2023, 5:37 IST
Last Updated 31 ಜನವರಿ 2023, 5:37 IST
ಬಂಟ್ವಾಳ ತಾಲ್ಲೂಕಿನ ಕಾಡಬೆಟ್ಟು ಗ್ರಾಮದ ಪಿಲಿಂಗಾಲು ಗಾಯತ್ರಿದೇವಿ ದೇವಸ್ಥಾನಕ್ಕೆ ರಾಘವೇಂದ್ರ ಸ್ವಾಮಿ ಉತ್ಸವ ಮೂರ್ತಿ ಹಸ್ತಾಂತರ ಕಾರ್ಯಕ್ರಮ ಗುರುವಾರ ನಡೆಯಿತು.
ಬಂಟ್ವಾಳ ತಾಲ್ಲೂಕಿನ ಕಾಡಬೆಟ್ಟು ಗ್ರಾಮದ ಪಿಲಿಂಗಾಲು ಗಾಯತ್ರಿದೇವಿ ದೇವಸ್ಥಾನಕ್ಕೆ ರಾಘವೇಂದ್ರ ಸ್ವಾಮಿ ಉತ್ಸವ ಮೂರ್ತಿ ಹಸ್ತಾಂತರ ಕಾರ್ಯಕ್ರಮ ಗುರುವಾರ ನಡೆಯಿತು.   

ಬಂಟ್ವಾಳ: ಇಲ್ಲಿನ ವಗ್ಗ ರಾಷ್ಟ್ರೀಯ ಹೆದ್ದಾರಿ ಸಮೀಪದ ಕಾಡಬೆಟ್ಟು ಗ್ರಾಮ ಪಿಲಿಂಗಾಲು ಎಂಬಲ್ಲಿ ₹ 1 ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡ ಗಾಯತ್ರಿ ದೇವಿ ದೇವಸ್ಥಾನಕ್ಕೆ ಭಕ್ತರೊಬ್ಬರು ರಾಘವೇಂದ್ರ ಸ್ವಾಮಿ ಉತ್ಸವ ಮೂರ್ತಿ ಸಮರ್ಪಿಸಿದರು.

ಕ್ಷೇತ್ರದ ಆಡಳಿತ ಧರ್ಮದರ್ಶಿ ಕೆ.ಎಸ್.ಪಂಡಿತ್ ಮಾತನಾಡಿ, ಫೆ.8ರಿಂದ 10ರತನಕ ನಡೆಯುವ ಬ್ರಹ್ಮಕಲಶೋತ್ಸವ ವೇಳೆ ಮಹಾ ಗಣಪತಿ ಮತ್ತು ಗುರು ರಾಘವೇಂದ್ರ ಸ್ವಾಮಿ ಬಿಂಬ ಪ್ರತಿಷ್ಠೆ ನಡೆಯಲಿದೆ ಎಂದರು.

ಇದೇ ವೇಳೆ ಶಿಲ್ಪಿ ಗುಣವಂತ ಭಟ್ ಕಾರ್ಕಳ ಇವರು ಪಂಚಲೋಹದ ರಾಘವೇಂದ್ರ ಸ್ವಾಮಿ ಉತ್ಸವ ಮೂರ್ತಿಗೆ ಪೂಜೆ ಸಲ್ಲಿಸಿದ ಬಳಿಕ ಹಸ್ತಾಂತರಿಸಿದರು. ಸೇವಾರ್ಥಿ ಜಯಪ್ರಕಾಶ್ ತುಂಬೆ, ಜೀರ್ಣೋದ್ಧಾರ ಸಮಿತಿ ಪ್ರಧಾನ ಕಾರ್ಯದರ್ಶಿ ನಾಗೇಶ ಕಲ್ಲಡ್ಕ, ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಮೋಹನ್ ಕೆ.ಶ್ರೀಯಾನ್ ರಾಯಿ, ಪ್ರಮುಖರಾದ ಅಭಿಷೇಕ್ ಪಿಲಿಂಗಾಲು, ಡೊಂಬಯ ಸಪಲ್ಯ, ಹರೀಶ ಪಿಲಿಂಗಾಲು ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.