ಪ್ರಾತಿನಿಧಿಕ ಚಿತ್ರ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ವ್ಯಾಪಕ ಮಳೆ ಆಗುತ್ತಿರುವುದರಿಂದ ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿಪೂರ್ವ ಕಾಲೇಜು ಸರ್ಕಾರಿ, ಅನುದಾನಿತ, ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಆ.29ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ ಆದೇಶ ಹೊರಡಿಸಿದ್ದಾರೆ.
ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಹೊರಡಿಸಿದ ಮುನ್ಸೂಚನೆಯಂತೆ, ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆಯಾಗಿದೆ. ಮೀನುಗಾರರು ಸಮುದ್ರಕ್ಕೆ ಇಳಿಯಬಾರದು, ಪ್ರವಾಸಿಗರು, ಸಾರ್ವಜನಿಕರು ನದಿತೀರಕ್ಕೆ, ಸಮುದ್ರ ತೀರಕ್ಕೆ ತೆರಳಬಾರದು ಎಂದು ಅವರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.