ADVERTISEMENT

ದಕ್ಷಿಣ ಕನ್ನಡದಲ್ಲಿ ರೆಡ್‌ ಅಲರ್ಟ್‌: ಶಾಲೆಗಳಿಗೆ ಇಂದು ರಜೆ

​ಪ್ರಜಾವಾಣಿ ವಾರ್ತೆ
Published 24 ಅಕ್ಟೋಬರ್ 2019, 18:30 IST
Last Updated 24 ಅಕ್ಟೋಬರ್ 2019, 18:30 IST

ಮಂಗಳೂರು: ಅರಬ್ಬಿ ಸಮುದ್ರ ಮತ್ತು ಲಕ್ಷ ದ್ವೀಪದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಇದರ ಪ್ರಭಾವದಿಂದ ಕೇರಳ ಮತ್ತು ಕರ್ನಾಟಕ ಕರಾವಳಿ ಹಾಗೂ ಮಲೆನಾಡು ಪ್ರದೇಶಗಳಲ್ಲಿ ಮುಂದಿನ ಎರಡು ದಿನಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವು ಎಚ್ಚರಿಕೆ ನೀಡಿದ್ದು, ಶುಕ್ರವಾರ ರೆಡ್‌ ಅಲರ್ಟ್‌ ಘೋಷಿಸಿದೆ.

ಈ ಹಿನ್ನೆಲೆಯಲ್ಲಿ ಶುಕ್ರವಾರ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ.

ಸಾರ್ವಜನಿಕರು ಈ ಅವಧಿಯಲ್ಲಿ ಮುಂಜಾಗ್ರತೆ ವಹಿಸುವಂತೆ ಹಾಗೂ ಮೀನುಗಾರರು ಸಮುದ್ರಕ್ಕಿಳಿಯದಂತೆ ಸೂಚನೆ ನೀಡಲಾಗಿದೆ.

ADVERTISEMENT

ಹವಾಮಾನ ಇಲಾಖೆ ಸೂಚನೆ ನೀಡಿರುವಂತೆ ಕರಾವಳಿಯಲ್ಲಿ ಹಿಂಗಾರು ಮಳೆ ಗುರುವಾರ ಮತ್ತಷ್ಟು ಬಿರುಸುಗೊಂಡಿದೆ. ಕಾಸರಗೋಡು, ಮಂಗಳೂರು ಹಾಗೂ ಉಡುಪಿ ಕರಾವಳಿಯಲ್ಲಿ ದಟ್ಟ ಮೋಡ ಕವಿದಿದ್ದು, ಮಳೆಯಾಗುತ್ತಿದೆ. ಜಿಲ್ಲೆಯಲ್ಲಿ 115.5 ಮಿ.ಮೀ. ನಿಂದ 204.4 ಮಿ ಮೀ ವರೆಗೆ ಮಳೆ ಬೀಳುವ ಸಾಧ್ಯತೆ ಇದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ತುರ್ತು ಸಂದರ್ಭದಲ್ಲಿ ಸಾರ್ವಜನಿಕರು ಸಹಾಯವಾಣಿ –1077 ಗೆ ಕರೆ ಮಾಡಬುದು. ಇಲ್ಲವೇ, ವಾಟ್ಸ್‌ಆ್ಯಪ್ ಸಂಖ್ಯೆ- 9483908000 ಗೆ ಸಂದೇಶ ರವಾನಿಸಿ ಎಂದು ಜಿಲ್ಲಾಧಿಕಾರಿ ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.