ದಕ್ಷಿಣ ಕನ್ನಡ ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆ: ಇಂದು ಶಾಲೆಗಳಿಗೆ ರಜೆ
ಪ್ರಜಾವಾಣಿ ಚಿತ್ರ: ಫಕ್ರುದ್ದೀನ್ ಎಚ್.
ಮಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಚಂಡಮಾರುತ ಬೀಸುವ ಸಾಧ್ಯತೆ ಇರುವುದರಿಂದ ಇದೇ 18ರಂದು (ಸೋಮವಾರ) ದಕ್ಷಿಣ ಕನ್ನಡ ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆಯಾಗಿದೆ. ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಸೋಮವಾರ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಅವರು ಆದೇಶ ಮಾಡಿದ್ದಾರೆ.
ಅರಬ್ಬಿ ಸಮುದ್ರದಲ್ಲಿ ಭಾರಿ ಗಾತ್ರದ ಅಲೆಗಳು ಏಳುವ ಸಾಧ್ಯತೆ ಇದ್ದು, ಮೀನುಗಾರರು ಸಮುದ್ರಕ್ಕೆ ತೆರಳದಂತೆ ಜಿಲ್ಲಾಡಳಿತ ಸೂಚಿಸಿದೆ.
ಜಿಲ್ಲೆಯಲ್ಲಿ ಭಾರಿ ಮಳೆ ಮುಂದುವರಿಯುವ ಮುನ್ಸೂಚನೆ ಇರುವುದರಿಂದ ಜಿಲ್ಲೆಗೆ ಇದೇ 19ರಂದು (ಮಂಗಳವಾರ) ರೆಡ್ ಅಲರ್ಟ್, ಇದೇ 20 ಮತ್ತು 21ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.