
ಮಂಗಳೂರು: ದೆಹಲಿಯಲ್ಲಿ ಸೋಮವಾರ ಸಂಭವಿಸಿದ ಸ್ಫೋಟದ ಬೆನ್ನಲ್ಲೆ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಕಟ್ಟೆಚ್ಚರ ವಹಿಸಲಾಗಿದೆ. ಸಂಭಾವ್ಯ ಅನಾಹುತ ತಡೆಯಲು ಪೊಲೀಸರು ಕೆಲ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದಾರೆ.
ಜಿಲ್ಲೆಯಾದ್ಯಂತ ರಾತ್ರಿ ವೇಳೆ ಸ್ತು ಕಾರ್ಯವನ್ನು ಕಟ್ಟುನಿಟ್ಟಾಗಿ ನಿರ್ವಹಿಸುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸ್ ಅಧಿಕಾರಿಗಳನ್ನು ಹಾಗೂ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಜಿಲ್ಲೆಯ ಪ್ರಮುಖ ಸ್ಥಳಗಳಲ್ಲಿ ನಾಕಾಬಂದಿ ಅಳವಡಿಸಿ, ವಾಹನಗಳನ್ನು ಕಟ್ಟುನಿಟ್ಟಾಗಿ ತಪಾಸಣೆ ನಡೆಸಲಾಗುತ್ತಿದೆ. ಜಿಲ್ಲೆಯ ಪ್ರವಾಸಿ ತಾಣಗಳು, ಧಾರ್ಮಿಕ ಸ್ಥಳಗಳು, ಮುಖ್ಯ ಸರ್ಕಾರಿ ಕಟ್ಟಡಗಳು ಸೇರಿದಂತೆ ಜನದಟ್ಟಣೆಯ ಜಾಗಗಳಲ್ಲಿ ಹೆಚ್ಚಿನ ಭದ್ರತೆ ಒದಗಿಸಲಾಗಿದೆ ಎಂದು ಪೊಲೀಸ್ ಇಲಾಖೆಯ ಮೂಲಗಳು ತಿಳಿಸಿವೆ.
‘ಯಾವುದೇ ಸಂಶಯಾಸ್ಪದ ವ್ಯಕ್ತಿಗಳು ಅಥವಾ ಸಂಶಯಾಸ್ಪದ ನಡೆ ಕಂಡುಬಂದಲ್ಲಿ ಸಾರ್ವಜನಿಕರು ತಕ್ಷಣ ಜಿಲ್ಲಾ ನಿಯಂತ್ರಣ ಕೊಠಡಿಗೆ (122) ಮಾಹಿತಿ ನೀಡಬೇಕು’ ಎಂದು ಪೊಲೀಸರು ವಿನಂತಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.