ಉಜಿರೆ: ಪಾಠದ ಜತೆಗೆ ಆಟಗಳಲ್ಲೂ ಆಸಕ್ತಿಯಿಂದ ಭಾಗವಹಿಸಿದಾಗ ದೈಹಿಕ ಹಾಗೂ ಮಾನಸಿಕ ಆರೋಗ್ಯ ವೃದ್ಧಿಯಾಗುತ್ತದೆ ಎಂದು ಧರ್ಮಸ್ಥಳದ ಸುಪ್ರಿಯಾ ಹರ್ಷೇಂದ್ರಕುಮಾರ್ ಹೇಳಿದರು.
ಶತಮನೋತ್ಸವ ಆಚರಣೆ ಸಂಭ್ರಮದಲ್ಲಿರುವ ಉಜಿರೆಯ ಎಸ್‌ಡಿಎಂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ನೂತನ ಚಿಣ್ಣರ ಆಟದ ಮನೆ ಉದ್ಘಾಟಿಸಿ ಅವರು ಮಾತನಾಡಿದರು.
ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಪ್ರೊ.ಎಸ್.ಸತೀಶ್ಚಂದ್ರ ಮಾತನಾಡಿದರು.
ನಿವೃತ್ತ ಶಿಕ್ಷಕರಾದ ಈಶ್ವರ ದೇವಾಡಿಗ, ಶಾಂತ ಅವರನ್ನು ಸನ್ಮಾನಿಸಲಾಯಿತು.
ಶರತ್‌ಕೃಷ್ಣ ಪಡ್ವೆಟ್ನಾಯ ಸ್ವಾಗತಿಸಿದರು. ನಿವೃತ್ತ ಮುಖ್ಯಶಿಕ್ಷಕ ಸೋಮಶೇಖರ ಶೆಟ್ಟಿ ವಂದಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.