ADVERTISEMENT

ಉಳ್ಳಾಲ: ಗುಜರಿ ಅಂಗಡಿಯಲ್ಲಿ ಬೆಂಕಿ ಅವಘಡ

​ಪ್ರಜಾವಾಣಿ ವಾರ್ತೆ
Published 12 ಅಕ್ಟೋಬರ್ 2025, 10:13 IST
Last Updated 12 ಅಕ್ಟೋಬರ್ 2025, 10:13 IST
   

ಉಳ್ಳಾಲ (ದಕ್ಷಿಣ ಕನ್ನಡ): ಇಲ್ಲಿಗೆ ಸಮೀಪದ ಕೆ.ಸಿ.ರೋಡ್‌ನಲ್ಲಿರುವ ಗುಜರಿ ಅಂಗಡಿಯಲ್ಲಿ ಭಾನುವಾರ ಮಧ್ಯಾಹ್ನ ಬೆಂಕಿ ಕಾಣಿಸಿಕೊಂಡಿದ್ದು, ಅಗ್ನಿಶಾಮಕ ದಳ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತವಾಗಿದೆ.

ಅಂಗಡಿಯ ಸಮೀಪದಲ್ಲೇ ಪೆಟ್ರೋಲ್ ಬಂಕ್ ಹಾಗೂ ಮನೆಗಳಿವೆ. ಬೆಂಕಿ ವ್ಯಾಪಿಸದಂತೆ ತಡೆಯಲು ಅಗ್ನಿಶಾಮಕ ಮತ್ತು ತುರ್ತು ಸೇವೆ ಸಿಬ್ಬಂದಿ ಶ್ರಮಿಸುತ್ತಿದ್ದಾರೆ. ಅಂಗಡಿಯಲ್ಲಿ ಭಾರಿ ಪ್ರಮಾಣದಲ್ಲಿ ಗುಜರಿ ದಾಸ್ತಾನು ಇರುವುದರಿಂದ‌ ಬೆಂಕಿಯನ್ನು ಹತೋಟಿಗೆ ತರುವುದು ಕಷ್ಟವಾಗಿದೆ.

ಬೆಂಕಿ ತಗುಲಿದ್ದು ಹೇಗೆ ಎಂಬುದು ಖಚಿತವಾಗಿಲ್ಲ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.