ADVERTISEMENT

ತಿರುಪತಿಯಲ್ಲಿ ಅಪಘಾತ: ದಕ್ಷಿಣ ಕನ್ನಡದ ಮಹಿಳೆ ಸಾವು

​ಪ್ರಜಾವಾಣಿ ವಾರ್ತೆ
Published 14 ಮೇ 2025, 18:28 IST
Last Updated 14 ಮೇ 2025, 18:28 IST
<div class="paragraphs"><p>ಮಹಿಳೆ ಸಾವು</p></div>

ಮಹಿಳೆ ಸಾವು

   

(ಪ್ರಾತಿನಿಧಿಕ ಚಿತ್ರ)

ಸುಬ್ರಹ್ಮಣ್ಯ (ದಕ್ಷಿಣ ಕನ್ನಡ): ತಿರುಪತಿ ಯಾತ್ರೆಗೆ ತೆರಳಿದ್ದ ಕರ್ನಾಟಕದವರ ವಾಹ ಅಪಘಾತಕ್ಕೀಡಾಗಿ ಬಿಳಿನೆಲೆ ಕೈಕಂಬದ ಶೇಷಮ್ಮ (70) ಮಹಿಳೆ ಮೃತಪಟ್ಟಿದ್ದಾರೆ. 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ತಿರುಪತಿ-ಶ್ರೀ ಕಾಳಹಸ್ತಿ ಹೆದ್ದಾರಿಯಲ್ಲಿ ಬುಧವಾರ ಬೆಳಿಗ್ಗೆ ಘಟನೆ ಸಂಭವಿಸಿದೆ.

ADVERTISEMENT

ಕಡಬ ತಾಲ್ಲೂಕು ಬಿಳಿನೆಲೆ ಗ್ರಾಮದ ಕೈಕಂಬದ ಕುಟುಂಬ ಹಾಗೂ ಅವರ ಸಂಬಂಧಿಕರು ಪ್ಯಾಕೇಜ್ ಟೂರ್‌ ಯೋಜನೆಯಡಿ ಟಿಟಿಯಲ್ಲಿ ತಿರುಪತಿ ಯಾತ್ರೆ ಕೈಗೊಂಡಿದ್ದರು. ಒಟ್ಟು ಮೂರು ವಾಹನಗಳಲ್ಲಿ ಕರ್ನಾಟಕದ ಇತರ ಭಾಗದವರೂ ವಾಹನದಲ್ಲಿದ್ದರು.

ಮಂಗಳವಾರ ಗುಂಡ್ಯದಿಂದ ವಾಹನ ಹೊರಟಿತ್ತು. ಬುಧವಾರ ಸಂಜೆ ತಿರುಪತಿಯಲ್ಲಿ ದರ್ಶನ ನೆರವೇರಿಸುವುದಕ್ಕೂ ಮೊದಲು ಶ್ರೀಕಾಳಹಸ್ತಿಗೆ ಕರ್ನಾಟಕದ ತಂಡ ಹೊರಟಿತ್ತು. ಕೈಕಂಬದವರು ಇದ್ದ ವಾಹನ ಮೇಲ್ಸೇತುವೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಬಡಿದು ಪಲ್ಟಿಯಾಗಿದೆ. ತೀವ್ರ ಗಾಯಗೊಂಡಿದ್ದ ಕೂಸಪ್ಪ ಅವರ ಪತ್ನಿ ಶೇಷಮ್ಮ (70) ಮೃತರಾಗಿದ್ದಾರೆ. ಕೈಕಂಬದ ತಿಲೇಶ್ (45), ಕಮಲಾಕ್ಷಿ (60) ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ವಿವಿಧ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಗೊಂಡವರಲ್ಲಿ ನಿವೃತ್ತ ಯೋಧ ಸೋಮಶೇಖರ್, ಶೀನಪ್ಪ, ಕೂಸಪ್ಪ, ನಿಖಿಲ್, ತನುಷ್‌ ಇದ್ದಾರೆ ಎಂದು ತಿಳಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.