ಬದಿಯಡ್ಕ : ಕರಿಂಬಿಲದಲ್ಲಿ ವಿದ್ಯುತ್ ಪರಿವರ್ತಕವೊಂದು ಆವರಣ ಬೇಲಿಯಿಲ್ಲದೆ, ಅಪಾಯಸೂಚಕ ಫಲಕವೂ ಇಲ್ಲದೆ ಇರುವುದು ನಾಗರಿಕರ ಆತಂಕಕ್ಕೆ ಕಾರಣವಾಗಿದೆ.
ಈ ಪ್ರದೇಶದಲ್ಲೇ ಬಸ್ ತಂಗುದಾಣವಿದ್ದು, ಮಕ್ಕಳು ಹಾಗೂ ಮಹಿಳೆಯರೂ ಸೇರಿದಂತೆ ನೂರಾರು ಮಂದಿ ಬಸ್ಸಿಗಾಗಿ ಕಾದಿರುತ್ತಾರೆ. ಈ ಪರಿವರ್ತಕದ ಫ್ಯೂಸ್‌ಗಳಿಗೆ ಕವಚಗಳಿಲ್ಲದಿರುವುದರಿಂದ ಮಳೆಗಾಲದಲ್ಲಿ ಅಪಾಯ ಹೆಚ್ಚಿದೆ. ಸಿಡಿಲಿನ ಸಂದರ್ಭದಲ್ಲಿ ಈ ವಿದ್ಯುತ್ ಪರಿವರ್ತಕದಿಂದ ಬೆಂಕಿ ಏಳುತ್ತದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಕೂಡಲೇ ಅಧಿಕಾರಿಗಳು ಸೂಕ್ತ ಸುರಕ್ಷತೆಯ ವ್ಯವಸ್ಥೆಗಳನ್ನು ಏರ್ಪಡಿಸಬೇಕೆಂದು ನಾಗರಿಕರು ಒತ್ತಾಯಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.