ADVERTISEMENT

ದ.ಕ: ನೂತನ ಜಿಲ್ಲಾಧಿಕಾರಿಯಾಗಿ ದರ್ಶನ್ ಎಚ್.ವಿ

​ಪ್ರಜಾವಾಣಿ ವಾರ್ತೆ
Published 18 ಜೂನ್ 2025, 4:13 IST
Last Updated 18 ಜೂನ್ 2025, 4:13 IST
ದರ್ಶನ್ ಎಚ್‌.ವಿ
ದರ್ಶನ್ ಎಚ್‌.ವಿ   

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರನ್ನು ವರ್ಗಾವಣೆ ಮಾಡಿರುವ ಸರ್ಕಾರ ಅವರ ಸ್ಥಾನಕ್ಕೆ ಐ.ಎ.ಎಸ್ ಅಧಿಕಾರಿ ದರ್ಶನ್ ಎಚ್.ವಿ. ಅವರನ್ನು ನಿಯೋಜಿಸಿದೆ.

2016ರ ಕರ್ನಾಟಕ ವೃಂದದ ಐಎಎಸ್ ಅಧಿಕಾರಿಯಾಗಿರುವ ದರ್ಶನ್ ಅವರು ಬೆಂಗಳೂರು ವಾಣಿಜ್ಯ ತೆರಿಗೆಗಳ ತೆರಿಗೆಗಳ ಹೆಚ್ಚುವರಿ ಆಯುಕ್ತರಾಗಿದ್ದರು. ಅವರ ವರ್ಗಾವಣೆಯಿಂದ ತೆರವಾದ ಸ್ಥಾನಕ್ಕೆ ಮುಲ್ಲೈ ಮುಗಿಲನ್ ಅವರನ್ನು ನಿಯೋಜಿಸಲಾಗಿದೆ.

ದರ್ಶನ್ ಅವರು ಈ ಹಿಂದೆ ಬೆಳಗಾವಿ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ, ಎಲೆಕ್ಟ್ರಾನಿಕ್ಸ್‌, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ನಿರ್ದೇಶಕರಾಗಿ,  ಕರ್ತವ್ಯ ನಿರ್ವಹಿಸಿದ್ದಾರೆ.  ಸೈಬರ್ ಭದ್ರತೆ ವಿಷಯದಲ್ಲಿ ಪರಿಣಿತರಾಗಿರುವ ಅವರು ಈ ಕುರಿತ ನೀತಿ ನಿರೂಪಣೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.

ADVERTISEMENT

ಮುಲ್ಲೈ ಮುಗಿಲನ್ ಅವರು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿ 2023ರ ಜೂನ್ 17ರಂದು ಅಧಿಕಾರ ಸ್ವೀಕರಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.