ADVERTISEMENT

ಮಂಗಳೂರಿನಿಂದ ಬೆಂಗಳೂರು ಹೋಗುವವರು ಸಂಪಾಜೆ ಮಾರ್ಗದಲ್ಲಿ ತೆರಳಲು ಡಿಸಿ ಸೂಚನೆ

​ಪ್ರಜಾವಾಣಿ ವಾರ್ತೆ
Published 30 ಜುಲೈ 2024, 9:41 IST
Last Updated 30 ಜುಲೈ 2024, 9:41 IST
ಮುಲ್ಲೈ ಮುಗಿಲನ್
ಮುಲ್ಲೈ ಮುಗಿಲನ್   

ಮಂಗಳೂರು: ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ದೊಡ್ಡತಪ್ಪಲೆಯಲ್ಲಿ ಭೂ ಕುಸಿತ ಆಗಿರುವುದರಿಂದ ಮಂಗಳೂರಿನಿಂದ ಬೆಂಗಳೂರು ಹೋಗುವವರು ಸಂಪಾಜೆ, ಮಡಿಕೇರಿ ಮಾರ್ಗವಾಗಿ ತೆರಳಬಹುದು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದ್ದಾರೆ‌.

ಹಾಸನ ಜಿಲ್ಲೆಯ ಸಕಲೇಶಪುರ ಸಮೀಪದ ದೊಡ್ಡತಪ್ಪಲೆಯಲ್ಲಿ ದೊಡ್ಡ ಪ್ರಮಾಣದಲ್ಲಿ ಭೂ ಕುಸಿತ ಆಗಿದೆ. ಹೀಗಾಗಿ, ಶಿರಾಡಿ ಘಾಟ್ ಮಾರ್ಗದಲ್ಲಿ ಸಂಚಾರ ಸ್ಥಗಿತಗೊಂಡಿದೆ. ಮುಂದಿನ ಸೂಚನೆಯವರೆಗೆ ಯಾರೂ ಶಿರಾಡಿ ಘಾಟ್ ಮಾರ್ಗದಲ್ಲಿ ಹೋಗಬಾರದು ಎಂದು ಅವರು ತಿಳಿಸಿದ್ದಾರೆ.

ಮಾಣಿಯಿಂದ ಪುತ್ತೂರು ಹೋಗುವಲ್ಲಿ ಕೂಡ ಸಣ್ಣ ಪ್ರಮಾಣದ ಲ್ಲಿ ಮಣ್ಣು ಕುಸಿತ ಆಗಿದ್ದು, ತೆರವು ಕಾರ್ಯ ನಡೆಯುತ್ತಿದೆ ಎಂದಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.