ಉಳ್ಳಾಲ: ಕೊಣಾಜೆ ಪೊಲೀಸ್ ಠಾಣೆ ವ್ಯಾಪ್ತಿಯ ಮುದಂಗುರುಕಟ್ಟೆ ಬಸ್ ನಿಲ್ದಾಣದಲ್ಲಿ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ.
ಅಸ್ವಾಭಾವಿಕವಾಗಿ ಮೃತಪಟ್ಟ ಸ್ಥಿತಿಯಲ್ಲಿ ಕಂಡು ಬಂದ ಕಾರಣ ‘ಸೊಕೊ’, ಶ್ವಾನದಳ ಮತ್ತು ಬೆರಳಚ್ಚು ತಂಡ ಪರಿಶೀಲಿಸಿದಾಗ ಬೆನ್ನಿನ ಭಾಗದಲ್ಲಿ ಸುಟ್ಟ ರೀತಿಯಲ್ಲಿರುವ ಗಾಯ ಕಾಣಿಸಿದ್ದು, ಮೇಲ್ನೋಟಕ್ಕೆ ಸಿಡಿಲಾಘಾತದಿಂದ ಮೃತಪಟ್ಟಿರುವ ಶಂಕೆ ವ್ಯಕ್ತಪಡಿಸಿದ್ದಾರೆ.
ಪಾತೂರು ಜುಮಾ ಮಸೀದಿ ಸಮೀಪದ ನಿವಾಸಿ ನಿಯಾಫ್ (28) ಎಂಬುವರ ಮೃತದೇಹ ಎಂದು ಗುರುತಿಸಿದ್ದು, ಅ.12ರಂದು ಸಂಜೆ ಮನೆಯಿಂದ ತೆರಳಿದ್ದವರು ನಾಪತ್ತೆಯಾಗಿದ್ದರು. ನಿಯಾಫ್ ವರ್ಷದ ಹಿಂದೆ ಮಹಿಳೆಯ ಚಿನ್ನದ ಸರ ಕಸಿದ ಪ್ರಕರಣದಲ್ಲಿ ಆರೋಪಿಯಾಗಿ ಜೈಲಿನಿಂದ ಬಿಡುಗಡೆಗೊಂಡಿದ್ದರು. ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.