ADVERTISEMENT

ಮುಂಡಾಜೆ ರಕ್ಷಿತಾರಣ್ಯ ಬಳಿ ಮಂಗಗಳ ಮೃತ ದೇಹ ಪತ್ತೆ

​ಪ್ರಜಾವಾಣಿ ವಾರ್ತೆ
Published 12 ಮಾರ್ಚ್ 2021, 6:39 IST
Last Updated 12 ಮಾರ್ಚ್ 2021, 6:39 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಉಜಿರೆ: ಬೆಳ್ತಂಗಡಿ ತಾಲ್ಲೂಕಿನ ಮುಂಡಾಜೆ ಗ್ರಾಮದ ಕಾಯರ್ತೋಡಿ ರಕ್ಷಿತಾರಣ್ಯ ಪ್ರದೇಶದಲ್ಲಿ ರಸ್ತೆ ಬದಿ ಶುಕ್ರವಾರ ಬೆಳಿಗ್ಗೆ ಐದು ಮಂಗಗಳ ಮೃತದೇಹ ಪತ್ತೆಯಾಗಿದೆ.

ಗುರುವಾರ ಸಂಜೆ ಮಂಗಗಳ ನರಳಾಟವನ್ನು ಸ್ಥಳೀಯರು ಆಲಿಸಿದ್ದಾರೆ.

ಅರಣ್ಯ ಇಲಾಖೆ, ಆರೋಗ್ಯ ಇಲಾಖೆ ಹಾಗೂ ಸ್ಥಳೀಯ ಗ್ರಾಮ ಪಂಚಾಯಿತಿಗೆ ಮಾಹಿತಿ ನೀಡಿದ್ದು, ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ADVERTISEMENT

ಇತ್ತೀಚೆಗೆ ಬೆಳಾಲು ರಸ್ತೆ ಸಮೀಪ ಎರಡು ಮಂಗಗಳ ಮೃತದೇಹ ಸಿಕ್ಕಿದ್ದು, ಅದರ ಮಾದರಿಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಿಕೊಡಲಾಗಿತ್ತು. ಇದೀಗ ಮತ್ತೆ 5 ಮಂಗಗಳ ಮೃತದೇಹ ಪತ್ತೆಯಾಗಿರುವುದು ಆತಂಕವನ್ನು ಉಂಟು ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.